For the best experience, open
https://m.samyuktakarnataka.in
on your mobile browser.

ಉಪಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

01:04 PM Sep 24, 2024 IST | Samyukta Karnataka
ಉಪಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ  ಆಸ್ಪತ್ರೆಗೆ ದಾಖಲು

ಅರಕೇರಾ: ತಾಲ್ಲೂಕಿನ ಆಲ್ಕೋಡ ಗ್ರಾಮದ ಕಸ್ತೂರಿ ಬಾ ವಸತಿ ನಿಲಯದಲ್ಲಿ ಮಂಗಳವಾರ ಬೆಳಗಿನ ಉಪಹಾರ (ಚಿತ್ರವನ್ನು ) ಸೇವಿಸಿದ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. 
ತಲೆ ಸುತ್ತು, ವಾಂತಿ ಹಾಗೂ ಆಯಾಸಕ್ಕೆ ಒಳಗಾದ ವಿದ್ಯಾರ್ಥಿಗಳನ್ನು ಅರಕೇರಾ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ. ರಾತ್ರಿ ವೇಳೆ ಅನ್ನ ಸಾಂಬರ್ ನೀಡಲಾಗಿದೆ ಯಾವುದೇ ತೊಂದರೆ ಇಲ್ಲದೆ ವಿದ್ಯಾರ್ಥಿಗಳು ನಿದ್ದೆ ಮಾಡಿದ್ದಾರೆ. ಬೆಳಗಿನ ವೇಳೆ ಚಿತ್ರವನ್ನು ಸೇವಿಸಿದ್ದರು ಎಂದು ತಿಳಿದುಬಂದಿದೆ. ಇದರಿಂದ ಗಾಬರಿಗೊಂಡ ವಿದ್ಯಾರ್ಥಿಗಳು ಶಿಕ್ಷಕರ ಗಮನಕ್ಕೆ ತಂದಿದ್ದರು. ಈ ವೇಳೆ ಶಿಕ್ಷಕರು ಅಸ್ವಸ್ಥ ವಿದ್ಯಾರ್ಥಿಗಳಿಗೆ ಒಆರ್‌ಎಸ್ ಕುಡಿಸಿದ್ದು, ಐದಾರು ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ವೈದ್ಯ ರಾಘವೇಂದ್ರ ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಆಹಾರದಲ್ಲಿ ವ್ಯತ್ಯಾಸವಾಗಿದ್ದರಿಂದಾಗಿ ಈ ರೀತಿಯ ಸಮಸ್ಯೆ ಆಗಿರಬಹುದು ಎಂದು ತಿಳಿಸಿದ್ದಾರೆ. 
ಮುಂಜಾಗ್ರತಾ ದೃಷ್ಟಿಯಿಂದ ಅಸ್ವಸ್ಥ ವಿದ್ಯಾರ್ಥಿಗಳನ್ನು ದೇವದುರ್ಗದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗಿದೆ. ಎಂದು ತಿಳಿಸಿದರು.
ಘಟನೆ ಬಗ್ಗೆ ಸತ್ಯ ಸಂಗತಿ ಅರಿಯಲು ಇಲಾಖಾ ಮಟ್ಟದ ವಿಚಾರಣೆ ನಡೆಸಬೇಕು ಎಂದು ಪಾಲಕರು ಪಟ್ಟು ಹಿಡಿದಿದ್ದಾರೆ.

ತಿಂಗಳ ಹಿಂದೆಯೇ ಮಧ್ಯಾಹ್ನದ ಊಟದಲ್ಲಿ ವಿಷ ಬೆರೆಸಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಆಘಾತ ಉಂಟಾಗಿದೆ. ಹಾಸ್ಟೆಲ್ ವಾರ್ಡನ್ ಹಾಗೂ ಶಾಲೆ ಮುಖ್ಯ ಶಿಕ್ಷಕರು ಉತ್ತರ ನೀಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.