ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಎಚ್‌ಡಿಕೆ-ವಿಜಯೇಂದ್ರ ನನ್ನನ್ನು ಸೋಲಿಸಲು ಸಾಧ್ಯವಿಲ್ಲ

03:15 PM Nov 27, 2023 IST | Samyukta Karnataka

ಬೆಂಗಳೂರು: ನನ್ನನ್ನ ಸೋಲಿಸಲು ತೀರ್ಮಾನ ಮಾಡಬೇಕಾಗಿರೋದು ಕ್ಷೇತ್ರದ ಜನ. ವಿಜಯೇಂದ್ರ ಹಾಗೂ ಕುಮಾರಸ್ವಾಮಿ ಅಲ್ಲ ಎಂದು ಸಂಸದ ಡಿ.ಕೆಸುರೇಶ್ ತಿರುಗೇಟು ನೀಡಿದ್ದಾರೆ.
ಕುಮಾರಸ್ವಾಮಿ-ವಿಜಯೇಂದ್ರ ಭೇಟಿ ವಿಚಾರ ಮತ್ತು 28ಕ್ಕೆ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ. ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಸೋಲಿಸುತ್ತೇವೆ ಎಂಬ ವಿಜಯೇಂದ್ರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಅವರು, ನನ್ನನ್ನ ಸೋಲಿಸೋಕೆ ಕ್ಷೇತ್ರದ ಜನ ತೀರ್ಮಾನ ಮಾಡಬೇಕು ಎಂದರು.
ಇನ್ನು ಬೆಂಗಳೂರು ಉತ್ತರದಲ್ಲಿ ಡಿ.ಕೆ ಸುರೇಶ್ ಸ್ಪರ್ಧೆ ಮಾಡುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲಿ ಸ್ಪರ್ಧಿಸಬೇಕು ಎನ್ನುವುದನ್ನು ನಾನು ತೀರ್ಮಾನ ಮಾಡಲ್ಲ. ನಾನು ಎಲ್ಲಿ ನಿಂತುಕೊಳ್ಳಬೇಕು ಎಂದು ಹೈಕಮಾಂಡ್ ತೀರ್ಮಾನ ಮಾಡುತ್ತಾರೆ. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧ ಎಂದರು.

Next Article