ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಸೆ. 6ರಂದು ಉದ್ಘಾಟನೆ

08:04 PM Sep 01, 2024 IST | Samyukta Karnataka

ಬೆಂಗಳೂರು: ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೆಪ್ಟೆಂಬರ್‌ 6 ಗೌರಿ ಹಬ್ಬದಂದು ಉದ್ಘಾಟಿಸಲಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳಲ್ಲಿ ಪ್ರಯೋಜನವಾಗಲಿದೆ. ಯೋಜನೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ಪಕ್ಷಬೇಧ ಮರೆತು ಎಲ್ಲ ಪಕ್ಷಗಳ ನಾಯಕರನ್ನು ಆಹ್ವಾನಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಎಲ್ಲರೂ ಭಾಗಿಯಾಗಬೇಕು ಎಂದು ಮನವಿ ಮಾಡಿದರು.

Next Article