ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಾಜ್ಯಸಭೆಯಲ್ಲಿ ಎನ್‌ಡಿಎಗೆ ಬಹುಮತ

12:46 PM Aug 28, 2024 IST | Samyukta Karnataka

ನವದೆಹಲಿ: ರಾಜ್ಯಸಭೆಯಲ್ಲಿ ಎನ್‌ಡಿಎ ಬಲ 119ಕ್ಕೆ ಏರಿದೆ.
ಉಪಚುನಾವಣೆಯಲ್ಲಿ ಬಿಜೆಪಿ 9 ಸ್ಥಾನದಲ್ಲಿ ಅವಿರೋಧ ಆಯ್ಕೆ ಆಗಿದ್ದಾರೆ ಹಾಗೂ ಮೈತ್ರಿಕೂಟವಾದ ಎನ್‌ಸಿಪಿ (ಅಜಿತ್‌ ಬಣ) ಹಾಗೂ ರಾಷ್ಟ್ರೀಯ ಲೋಕ ಮಂಚ್‌ 2ರಲ್ಲಿ ಗೆದ್ದಿವೆ. ಇದರಿಂದ ಬಿಜೆಪಿ ಬಲ 96ಕ್ಕೆ ಹಾಗೂ ಎನ್‌ಡಿಎ ಬಲ 112ಕ್ಕೆ ಏರಿದೆ. ಇದೇ ವೇಳೆ 6 ನಾಮನಿರ್ದೇಶಿತ ಹಾಗೂ ಒಬ್ಬ ಸ್ವತಂತ್ರ ಅಭ್ಯರ್ಥಿಯ ಬೆಂಬಲ ಇರುವ ಕಾರಣ ಎನ್‌ಡಿಎ ಬಲ 119ಕ್ಕೆ ಏರಿದೆ. ಹೀಗಾಗಿ ಎನ್‌ಡಿಎ ಸರಳ ಬಹುಮತ ಮುಟ್ಟಿದಂತಾಗಿದೆ. ಮೇಲ್ಮನೆಯಲ್ಲಿ ಬಿಜೆಪಿ ನೇತೃತ್ವದ ಆಡಳಿತಾರೂಢ ಎನ್‌ಡಿಎ ಸರಳ ಬಹುಮತ ಪ್ರಾಪ್ತವಾಗಿದೆ. ರಾಜ್ಯಸಭೆ ಉಪ-ಚುನಾವಣೆಯಲ್ಲಿ ಮಂಗಳವಾರ 12 ಮಂದಿ ಅವಿರೋಧವಾಗಿ ಆಯ್ಕೆಗೊಂಡಿದ್ದು, ಅದರಲ್ಲಿ ಬಿಜೆಪಿಯ 9 ಮಂದಿ, ಎನ್‌ಡಿಎ ಮಿತ್ರಪಕ್ಷದ ಇಬ್ಬರು ಮತ್ತು ಕಾಂಗ್ರೆಸ್‌ನಿಂದ ಒಬ್ಬರು ಇದ್ದಾರೆ.

ಬಿಜೆಪಿ ಅಭ್ಯರ್ಥಿಗಳು: ರಂಜನ್ ದಾಸ್ ಮತ್ತು ರಾಮೇಶ್ವರ್ ತೇಲಿ, ಮನನ್ ಕುಮಾರ್ ಮಿಶ್ರಾ, ಕಿರಣ್ ಚೌಧರಿ, ಜಾರ್ಜ್ ಕುರಿಯನ್, ಧೈರ್ಯಶೀಲ್ ಪಾಟೀಲ್, ಮಮತಾ ಮೊಹಾಂತ, ರವನೀತ್ ಸಿಂಗ್ ಬಿಟ್ಟು, ರಾಜೀವ್, ಭಟ್ಟಾಚಾರ್ಯ ಆಯ್ಕೆ ಆಗಿದ್ದಾರೆ.
ಎನ್‌ಡಿಎ ಅಭ್ಯರ್ಥಿ: ನಿತಿನ್ ಪಾಟೀಲ್, ಉಪೇಂದ್ರ ಕುಶ್ವಾಹಾ ಬಿಹಾರದಿಂದ ಮೇಲ್ಮನೆಗೆ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್‌ ಅಭ್ಯರ್ಥಿ: ಹಿರಿಯ ವಕೀಲ ಅಭಿಷೇಕ್‌ ಸಿಂಘ್ವಿ

Tags :
#Bjp#loksabha#NarendraModi#NDA#RajyaSabhacongress
Next Article