For the best experience, open
https://m.samyuktakarnataka.in
on your mobile browser.

ಎರಡು ಪ್ರತ್ಯೇಕ ಅಪಘಾತ : ಸಂತಾಪ ಸೂಚಿಸಿದ ಸಿಎಂ

10:29 AM Jan 22, 2025 IST | Samyukta Karnataka
ಎರಡು ಪ್ರತ್ಯೇಕ ಅಪಘಾತ   ಸಂತಾಪ ಸೂಚಿಸಿದ ಸಿಎಂ

ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವು: ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ

ಬೆಂಗಳೂರು: ಅಪಘಾತಗಳಲ್ಲಿ ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯದಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತಗಳ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದಿದ್ದಾರೆ.

Tags :