ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಎಲೆಕ್ಟ್ರಿಕಲ್ ಆಟೋ ವಿರುದ್ಧ ಬೀದಿಗಿಳಿದ ರಿಕ್ಷಾ ಚಾಲಕರು

07:49 PM Aug 29, 2024 IST | Samyukta Karnataka

ಮಂಗಳೂರು: ಎಲೆಕ್ಟ್ರಿಕಲ್ ಅಟೋ ರಿಕ್ಷಾಗಳಿಗೆ ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ ನೀಡಿರುವ ಆದೇಶವನ್ನು ವಾಪಸ್ ಪಡೆಯಲು ಒತ್ತಾಯಿಸಿ ಸಾವಿರಾರು ಸಂಖ್ಯೆಯಲ್ಲಿ ಆಟೋ ರಿಕ್ಷಾ ಚಾಲಕರು ಪ್ರತಿಭಟನೆ ನಡೆಸಿದರು.
ದಕ್ಷಿಣ ಕನ್ನಡ ಜಿಲ್ಲಾ ಆಟೋರಿಕ್ಷಾ ಚಾಲಕರ ಮಾಲಕರ ಸಂಘಗಳ ಒಕ್ಕೂಟ ಮತ್ತು ಸಮಾನ ಮನಸ್ಕ ಆಟೋರಿಕ್ಷಾ ಚಾಲಕ ಮಾಲಕರ ಸಂಘಟನೆಗಳ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ವೃತ್ತದಿಂದ ಕ್ಲಾಕ್ ಟವರ್‌ವರೆಗೆ ಮೆರವಣಿಗೆ ನಡೆಸಿದ ಆಟೋ ರಿಕ್ಷಾ ಚಾಲಕರು, ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸಿ ಮನವಿ ಸ್ವೀಕರಿಸಲು ಒತ್ತಾಯಿಸಿ ಪ್ರತಿಭಟಿಸಿದರು.
ಜಿಲ್ಲಾಧಿಕಾರಿ ಕಚೇರಿ ಚಲೋಗೆ ನಿರ್ಧರಿಸಿ ಮೆರವಣಿಗೆ ಆರಂಭಿಸಿದ್ದ ಆಟೋ ರಿಕ್ಷಾ ಚಾಲಕರನ್ನು ಪೊಲೀಸರು ಕ್ಲಾಕ್ ಟವರ್ ಬಳಿ ಬ್ಯಾರಿಕೇಡ್ ಗಳನ್ನೂ ಅಳವಡಿಸಿ ತಡೆದರು.
ಈ ಸಂಧರ್ಭ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಮುಖಂಡ ಸುನಿಲ್ ಕುಮಾರ್ ಬಜಾಲ್, ಜಿಲ್ಲಾಧಿಕಾರಿಯವರು ಏಕಪಕ್ಷೀಯವಾಗಿ ಎಲೆಕ್ಟ್ರಿಕ್ ಆಟೋ ರಿಕ್ಷಾ ಬಗ್ಗೆ ಆದೇಶ ಮಾಡಿರುವುದನ್ನು ಹಿಂಪಡೆಯುವ ನಿಟ್ಟಿನಲ್ಲಿ ಈ ಹೋರಾಟ ಎಚ್ಚರಿಕೆಯ ಕರೆಗಂಟೆ. ಆದೇಶ ವಾಪಸ್ ಪಡೆಯದಿದ್ದರೆ ಜಿಲ್ಲೆಯ ಸಾವಿರಾರು ಸಂಖ್ಯೆಯ ಜನರ ಬದುಕಿಗೆ ಕೊಳ್ಳಿ ಇಟ್ಟಂತೆ ಎಂದರು.
ಮಾತೆತ್ತಿದರೆ ಕೇಂದ್ರ ಸರಕಾರದ ತೀರ್ಮಾನ ಎನ್ನುತ್ತಾರೆ. ಆದರೆ ಪಕ್ಕದ ಉಡುಪಿ ಅಥವಾ ಬೇರೆ ಜಿಲ್ಲೆಗಳಲ್ಲಿ ಇಲ್ಲದ ಆದೇಶ ದಕ ಜಿಲ್ಲೆಯಲ್ಲಿ ಯಾಕೆ ಎಂದು ಪ್ರಶ್ನಿಸಿದ ಅವರು, ಎಲೆಕ್ಟ್ರಿಕ್ ಕಂಪನಿಗಳ ಜೊತೆ ಶಾಮೀಲಾಗಿ ಈ ತೀರ್ಮಾನವನ್ನು ಜಿಲ್ಲಾಡಳಿತ ಮಾಡಿದೆ ಎಂದು ಆರೋಪಿಸಿದರು.
ನಗರದಲ್ಲಿ ಏಳರಿಂದ ಒಂಬತ್ತು ಸಾವಿರ ರಿಕ್ಷಾ ಚಾಲಕರು ಬಾಡಿಗೆಗಾಗಿ ಪರಿತಪಿಸುತ್ತಿದ್ದಾರೆ. ರಿಕ್ಷಾ ಪಾರ್ಕ್‌ನಲ್ಲಿ ಲೆಕ್ಕಕ್ಕಿಂತ ಹೆಚ್ಚು ರಿಕ್ಷಾ ನಿಂತರೆ ಪೊಲೀಸರು ಪ್ರಕರಣ ದಾಖಲಿಸುತ್ತಾರೆ. ಸುಮಾರು ಒಂಬತ್ತು ಸಾವಿರ ರಿಕ್ಷಾಗಳಿಗೆ ೧೧೫ ಅಧಿಕೃತ ಪಾರ್ಕ್ ಇರುವುದು. ಹೀಗಿರುವಾಗ ಇಷ್ಟು ರಿಕ್ಷಾಗಳು ಪಾರ್ಕ್ ಮಾಡುವುದು ಎಲ್ಲಿ ಎಂದು ಪ್ರಶ್ನಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಲೋಕೇಶ್ ಶೆಟ್ಟಿ ಬಲ್ಲಾಳ ಬಾಗ್, ವಿಷ್ಣು ಮೂರ್ತಿ, ಅರುಣ್ ಕುಮಾರ್ ಮಾತನಾಡಿದರು. ದ.ಕ.ಜಿಲ್ಲಾಡಳಿತದ ನಿರ್ಧಾರವನ್ನು ಕೂಡಲೇ ವಾಪಸ್ ಪಡೆದು ಜಿಲ್ಲೆಯಾದ್ಯಂತ ಅಟೋರಿಕ್ಷಾ ಚಾಲಕರು ಅನುಭವಿಸುತ್ತಿರುವ ಭವಣೆಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ ವೈಜ್ಞಾನಿಕ ನೆಲೆಯಲ್ಲಿ ವ್ಯವಸ್ಥೆ ಮಾಡಬೇಕೆಂದು ಎಂದು ಒಕ್ಕೂಟ ಒತ್ತಾಯಿಸಿದೆ.

Next Article