ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಎಲ್ಲಾ ಧರ್ಮದವರೂ ಒಂದೇ ತಾಯಿಯ ಮಕ್ಕಳಂತೆ ಇರಬೇಕು

07:25 PM May 21, 2024 IST | Samyukta Karnataka

ಬೆಂಗಳೂರು: ಎಲ್ಲಾ ಧರ್ಮದವರೂ ಒಂದೇ ತಾಯಿಯ ಮಕ್ಕಳಂತೆ ಇರಲು ಎಲ್ಲ ಧರ್ಮದವರಲ್ಲೂ ಆರ್ಥಿಕ, ಸಾಮಾಜಿಕ, ರಾಜಕೀಯ ಶಕ್ತಿ ತುಂಬಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನ ಹೆಗಡೆ ನಗರದಲ್ಲಿರುವ ಹಜ್ ಭವನದಲ್ಲಿ ಆಯೋಜಿಸಲಾಗಿದ್ದ ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.
10,168 ಹಜ್ ಯಾತ್ರಿಗಳ ಪ್ರಯಾಣ ಸುಖಕರವಾಗಿರಲಿ ಎಂದು ಶುಭ ಕೋರಿದ್ದೇನೆ. ಸಮಾಜದಲ್ಲಿ ಸಾಮರಸ್ಯ, ಸೌಹಾರ್ದತೆ ನೆಲಸಲಿ ಎಂದು ಪ್ರಾರ್ಥಿಸುವಂತೆ ತಿಳಿಸಿದ್ದೇನೆ. ಕುವೆಂಪು ಅವರು ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿದಂತೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಭೌದ್ಧ, ಸಿಖ್ ಧರ್ಮದವರೆಲ್ಲಾ ಒಂದು ತಾಯಿಯ ಮಕ್ಕಳಂತೆ ಇರಬೇಕು. ಅಂಥ ವಾತಾವರಣ ನಿರ್ಮಾಣವಾಗಬೇಕಾದರೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಶಕ್ತಿ ಬಂದು ಎಲ್ಲರೂ ಸಬಲರಾಗಬೇಕು. ಅದಕ್ಕೆ ಹಜ್ ಯಾತ್ರಿಗಳು ಪ್ರಾರ್ಥಿಸಲಿ. ಪ್ರಸ್ತುತ ಆರ್ಥಿಕ ವರ್ಷದಲ್ಲಿ ದೇಶ ಹಾಗೂ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಬೆಳೆ ಬರಲಿ, ನಾಡು ಸಮೃದ್ಧವಾಗಲಿ ಎಂದು ಪ್ರಾರ್ಥಿಸುವಂತೆ ಎಲ್ಲಾ ಯಾತ್ರಾರ್ಥಿಗಳಲ್ಲಿ ಮನವಿ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಹಜ್ ಭವನ ನಿರ್ಮಾಣಕ್ಕಾಗಿ ಅನುದಾನ
ಮಂಗಳೂರು ಮತ್ತು ಕಲಬುರ್ಗಿಯಲ್ಲಿ ಹಜ್ ಭವನ ನಿರ್ಮಾಣಕ್ಕಾಗಿ ಅನುದಾನ ಒದಗಿಸಲಾಗಿದೆ. ಕಲಬುರ್ಗಿಯಲ್ಲಿ ಸ್ಥಳ ಸಿಗದೇ ವಿಳಂಬವಾಗಿದೆ. ಮಂಗಳೂರಿನಲ್ಲಿ ಸ್ಥಳ ಗುರುತಿಸಲಾಗಿದೆ ಎಂದರು. ನೀತಿ ಸಂಹಿತೆ ಮುಗಿದ ಮೇಲೆ ಗುದ್ದಲಿ ಪೂಜೆ ನೆರವೇರಿಸಲಾಗುವುದು ಎಂದರು.
ಪ್ರತಿ ದಿನ ಹಜ್‌ಗೆ ತೆರಳುವವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸಚಿವ ಜಮೀರ್ ಅಹಮ್ಮದ್ ಅವರನ್ನು ಮುಖ್ಯಮಂತ್ರಿಗಳು ಶ್ಲಾಘಿಸಿದರು.

Next Article