ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಎಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ, ವಾಣಿಜ್ಯನಗರಿ ಜಗಮಗ

10:14 PM Aug 14, 2024 IST | Samyukta Karnataka

ಹುಬ್ಬಳ್ಳಿ: ೭೮ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಅವಳಿ ನಗರದಲ್ಲಿ ಮನೆ ಮಾಡಿದೆ. ಸರ್ಕಾರಿ ಕಚೇರಿಗಳು, ವಿವಿಧ ಸಂಘ ಸಂಸ್ಥೆಗಳ ಕಚೇರಿಗಳು, ಸಂಘಟನೆಗಳು, ಶಾಲಾ ಕಾಲೇಜುಗಳಲ್ಲಿ ತ್ರಿವರ್ಣ ಧ್ವಜ ಹಾರಿಸಲು ಸಕಲ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ.
ಸರ್ಕಾರಿ ಕಚೇರಿಗಳು ದೀಪಾಲಂಕಾರಗಳಿಂದ ಕಂಗೊಳಿಸುತ್ತಿವೆ. ಮಾರುಕಟ್ಟೆಯಲ್ಲಿ ಖಾದಿ ಬಾವುಟ ಖರೀದಿ ಮತ್ತು ಮಾರಾಟ ಭರಾಟೆ ಜೋರಾಗಿದೆ. ನಗರದ ಪ್ರಮುಖ ವೃತ್ತಗಳನ್ನು ಶುಚಿಗೊಳಿಸುವುದರೊಂದಿಗೆ ಜನತೆ ಸುಣ್ಣ, ಬಣ್ಣ ಬಳಿದು ಸಿಂಗರಿಸಿದ್ದಾರೆ.
ಮಾರುಕಟ್ಟೆ ಪ್ರದೇಶಗಳಲ್ಲಿ ಸಾರ್ವಜನಿಕರು ವಿವಿಧ ಬಗೆಯ ಅತ್ಯಾಕರ್ಷಕ ಧ್ವಜ ಖರೀದಿಸಿದ್ದು, ಶಾಲಾ ವಿದ್ಯಾರ್ಥಿಗಳು ವಿವಿಧ ಬಗೆಯ ಧ್ವಜ ಖರೀದಿ ಮಾಡುವ ದೃಶ್ಯಗಳು ಕಂಡುಬಂದವು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಾರುಕಟ್ಟೆಯಲ್ಲಿ ಖಾದಿ ಬಾವುಟ, ಖಾದಿ ಬಣ್ಣದ ಶಾಲು, ಪರಪರಿ ಹಾಳೆ, ಟೋಪಿ, ಮಕ್ಕಳು ಬಳಸುವ ಕೈಬೆಲ್ಟ್‌ಗಳು, ನೂಲುದಾರ, ಬಲೂನ್, ಸ್ಟೀಕರ್ ಹೀಗೆ ವಿವಿಧ ಬಗೆಯ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ.
ಜಿಲ್ಲೆಯಲ್ಲಿರುವ ವಿವಿಧ ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಅದರಲ್ಲೂ ಮಹಾನಗರ ಪಾಲಿಕೆ, ಸಂಗೊಳ್ಳಿ ರಾಯಣ್ಣ ವೃತ್ತ, ಚನ್ನಮ್ಮ ವೃತ್ತಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ.

Next Article