For the best experience, open
https://m.samyuktakarnataka.in
on your mobile browser.

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

06:54 PM Jan 17, 2024 IST | Samyukta Karnataka
ಎಸ್‌ಎಸ್‌ಎಲ್‌ಸಿ  ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ರಾಜ್ಯದಲ್ಲಿ 2023-24ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿಯಿಂದ ಪ್ರಕಟಿಸಲಾಗಿದೆ.

ಬೆಂಗಳೂರು: ರಾಜ್ಯದಲ್ಲಿ 2023-24ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿಯಿಂದ ಪ್ರಕಟಿಸಲಾಗಿದೆ.
ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ SSLC ಪರೀಕ್ಷೆಯ ವೇಳಾಪಟ್ಟಿ ಹಾಗೂ ಮಾರ್ಚ್ 1 ರಿಂದ ಮಾರ್ಚ್ 22 ರವರೆಗೆ ದ್ವಿತೀಯ ಪಿಯು ಪರೀಕ್ಷೆಯ ವೇಳಾಪಟ್ಟಿಯನ್ನು ಹಂಚಿಕೆ ಮಾಡಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ : 25-03-2024 - ರಂದು ಪ್ರಥಮ ಭಾಷೆ ಕನ್ನಡ,ಇಂಗ್ಲಿಷ್, ಹಿಂದಿ, ಮರಾಠಿ,ತಮಿಳು, ಉರ್ದು,ಸಂಸ್ಕೃತ
27-03-2024 - ರಂದು ಸಮಾಜ ವಿಜ್ಞಾನ, 30-03-2024 ವಿಜ್ಞಾನ, ರಾಜ್ಯ ಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, 02-04-2024 ಗಣಿತ,ಸಮಾಜ ಶಾಸ್ತ್ರ, 03-04-2024 ಅರ್ಥಶಾಸ್ತ್ರ, 04-04-2024 - ತೃತೀಯ ಭಾಷೆ ಕನ್ನಡ,ಇಂಗ್ಲಿಷ್, ಹಿಂದಿ, ಉರ್ದು,ಸಂಸ್ಕೃತ, ಪರ್ಶಿಯನ್, ತುಳು, 06-04-2024 - ದ್ವೀತಿಯ ಭಾಷೆ ಇಂಗ್ಲಿಷ್, ಕನ್ನಡ

ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ : 01-03-2024 - ಕನ್ನಡ ಹಾಗೂ ಅರೇಬಿಕ್, 04-03-2024 - ಗಣಿತ, 05-03-2024 - ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ, 06-03-2024 - ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್, 07-03-2024 - ಇತಿಹಾಸ ಹಾಗೂ ಭೌತಶಾಸ್ತ್ರ, 09-03-2024 - ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ, 11-03-2024 - ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, 13-03-2024 - ಇಂಗ್ಲಿಷ್, 15-03-2024 -ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ, 16-03-2024 - ಅರ್ಥಶಾಸ್ತ್ರ, 18-03-2024 - ಭೂಗೋಳ ಶಾಸ್ತ್ರ, ಜೀವಶಾಸ್ತ್ರ, 20-03-2024 - ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, 22-03-2024 - ಹಿಂದಿ