ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಎಸ್ಸಾರ್ ಗ್ರೂಪ್ ಸಹ-ಸಂಸ್ಥಾಪಕ ಶಶಿಕಾಂತ್ ರೂಯಾ ವಿಧಿವಶ

11:53 AM Nov 26, 2024 IST | Samyukta Karnataka

ನವದೆಹಲಿ: ಭಾರತದ ಬಿಲಿಯನೇರ್​ಗಳಲ್ಲಿ ಒಬ್ಬರೆನಿಸಿದ್ದ ಹಾಗೂ ಎಸ್ಸಾರ್ ಗ್ರೂಪ್​ನ ಸಹ-ಸಂಸ್ಥಾಪಕರಾದ ಶಶಿಕಾಂತ್ ರೂಯಾ ಸೋಮವಾರ ತಡರಾತ್ರಿ ನಿಧನರಾಗಿದ್ದಾರೆ.
ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರ ಕುಟುಂಬ ಮೂಲಗಳು ಮಾಧ್ಯಮಗಳಿಗೆ ತಿಳಿಸಿದ ಮಾಹಿತಿ ಪ್ರಕಾರ ಸೋಮವಾರ ಮಧ್ಯರಾತ್ರಿ 11:55ಕ್ಕೆ ಕೊನೆಯುಸಿರೆಳೆದಿದ್ದಾರೆ. ಇತ್ತೀಚಿನ ವರ್ಷಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗುತ್ತಿತ್ತು. ಚಿಕಿತ್ಸೆಗಾಗಿ ಅಮೆರಿಕಕ್ಕೂ ಹೋಗಿದ್ದರು. ಕಳೆದ ತಿಂಗಳಷ್ಟೇ ಅವರು ಭಾರತಕ್ಕೆ ವಾಪಸ್ಸಾಗಿದ್ದರು.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು, ಉದ್ಯಮಿಗಳು ಶಶಿ ರೂಯಾ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ. ‘ಉದ್ಯಮ ವಲಯದಲ್ಲಿ ಶಶಿಕಾಂತ್ ರೂಯಾ ಅವರದ್ದು ಮೇರು ವ್ಯಕ್ತಿತ್ವ. ತಮ್ಮ ಬದ್ಧತೆಯಿಂದ ಅವರು ಭಾರತದಲ್ಲಿ ಬಿಸಿನೆಸ್ ಸ್ವರೂಪವನ್ನು ಬದಲಿಸಿದ್ದರು. ಅವರ ಸಾವು ನಿಜಕ್ಕೂ ಬೇಸರ ತಂದಿದೆ. ಅವರ ಕುಟುಂಬ ಹಾಗೂ ಪ್ರೀತಿಪಾತ್ರರಿಗೆ ನನ್ನ ಸಂತಾಪಗಳಿರುತ್ತವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಶಶಿ ರೂಯಾ ಅವರು ದೇಶ ವಿದೇಶಗಳಲ್ಲಿ ಹಲವು ಉದ್ಯಮ ಸಂಘಟನೆಗಳಲ್ಲಿ ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದರು. ಭಾರತೀಯ ವಾಣಿಜ್ಯ ಮತ್ತು ಉದ್ಯಮ ಚೇಂಬರ್ಸ್​ನ ಮ್ಯಾನೇಜಿಂಗ್ ಕಮಿಟಿಯಲ್ಲಿ ಅವರು ಇದ್ದರು. ಭಾರತ ಅಮೆರಿಕ ಜಂಟಿ ಬಿಸಿನೆಸ್ ಮಂಡಳಿಯ ಅಧ್ಯಕ್ಷರಾಗಿದ್ದರು. ಭಾರತೀಯ ಹಡಗು ಮಾಲೀಕರ ಸಂಘದ ಅಧ್ಯಕ್ಷರಾಗಿದ್ದರು. ಪ್ರಧಾನಿಗಳ ಇಂಡೋ ಯುಎಸ್ ಸಿಇಒ ಫೋರಂನ ಸದಸ್ಯರಾಗಿದ್ದರು. ಭಾರತ ಜಪಾನ್ ಬಿಸಿನೆಸ್ ಕೌನ್ಸಿಲ್​ನಲ್ಲೂ ಸದಸ್ಯರಾಗಿದ್ದರು.

Tags :
#RIP#ShashikantRuia
Next Article