For the best experience, open
https://m.samyuktakarnataka.in
on your mobile browser.

ಎಸ್‌ಸಿ, ಎಸ್‌ಟಿ ಉಪ ವರ್ಗೀಕರಣಕ್ಕೆ ಅಸ್ತು

12:35 PM Aug 01, 2024 IST | Samyukta Karnataka
ಎಸ್‌ಸಿ  ಎಸ್‌ಟಿ ಉಪ ವರ್ಗೀಕರಣಕ್ಕೆ ಅಸ್ತು

ನವದೆಹಲಿ: ಎಸ್‌ಸಿ, ಎಸ್‌ಟಿ ಉಪ ವರ್ಗೀಕರಣಕ್ಕೆ ಅಸ್ತು ಎಂದ ಸುಪ್ರೀಂ ಕೋರ್ಟ್‌.
ರಾಜ್ಯಗಳಿಗೆ ಉಪ ವರ್ಗೀಕರಣಕ್ಕೆ ಅಧಿಕಾರವಿದೆ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ವರ್ಗೀಕರಣಕ್ಕೆ ಸುಪ್ರೀಂ ಕೋರ್ಟ್‌ನ ಏಳು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು 6:1 ಬಹುಮತದೊಂದಿಗೆ ಅನುಮತಿ ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ವಿಕ್ರಮ್ ನಾಥ್, ಬೇಲಾ ಎಂ ತ್ರಿವೇದಿ, ಪಂಕಜ್ ಮಿಥಾಲ್, ಮನೋಜ್ ಮಿಶ್ರಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠವು ಮೂರು ದಿನಗಳ ವಿಚಾರಣೆಯ ನಂತರ ಈ ವರ್ಷ ಫೆಬ್ರವರಿ 8ರಂದು ತೀರ್ಪನ್ನು ಕಾಯ್ದಿರಿಸಿತ್ತು. ಎಸ್‌ಸಿ-ಎಸ್‌ಟಿ ವರ್ಗಗಳಲ್ಲಿ ಹೆಚ್ಚು ಹಿಂದುಳಿದವರಿಗೆ ಪ್ರತ್ಯೇಕ ಕೋಟಾಗಳನ್ನು ನೀಡಲು ಅನುಮತಿಯಿದೆ ಎಂದು ಪೀಠ ಹೇಳಿದೆ. ಪೀಠವು 6:1 ಬಹುಮತದೊಂದಿಗೆ ಅನುಮತಿ ನೀಡಿದೆ. ನ್ಯಾಯಮೂರ್ತಿ ಬೇಲಾ ತ್ರಿವೇದಿ ಅನುಮತಿಗೆ ಅಸಮ್ಮತಿ ವ್ಯಕ್ತಪಡಿಸಿದ್ದಾರೆ.