ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಏಕನಾಥ್ ಶಿಂದೆ ನಾಮಪತ್ರ ಸಲ್ಲಿಕೆ

10:47 PM Oct 28, 2024 IST | Samyukta Karnataka

ಥಾಣೆ: ಕೊಪ್ರಿ-ಪಚ್ಪಖಾಡಿ ಕ್ಷೇತ್ರದಿಂದ ಸ್ಪರ್ಧಿಸಲಿರುವ ಮಹಾರಾಷ್ಟç ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಮಂಗಳವಾರ ಕೊನೆ ದಿನವಾಗಿದೆ. ಶಿಂದೆ ಅವರು ಶಿವಸೇನಾ (ಯುಬಿಟಿ) ಬಣದ ಕೇದಾರ್ ದಿಘೆ ಅವರನ್ನು ಎದುರಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ತಮ್ಮ ರಾಜಕೀಯ ಮಾರ್ಗದರ್ಶಕ ಆನಂದ್ ದಿಘೆ ಅವರಿಗೆ ಶಿಂದೆ ಪುಷ್ಟ ನಮನ ಸಲ್ಲಿಸಿದರು. ಬಳಿಕ ಬೃಹತ್ ರೋಡ್ ಶೋ ನಡೆಸಿದರು. ಈ ರ‍್ಯಾಲಿ ಪಕ್ಷದ ಶಕ್ತಿ ಪ್ರದರ್ಶನಕ್ಕೂ ಸಾಕ್ಷಿಯಾಯಿತು. ೨೦೦೯ರಿಂದ ಸತತವಾಗಿ ಕೊಪ್ರಿ-ಪಚ್ಪಖಾಡಿ ಕ್ಷೇತ್ರದಿಂದ ಶಿಂದೆ ಗೆಲ್ಲುತ್ತಾ ಬಂದಿದ್ದಾರೆ. ೨೮೮ ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ ೨೦ರಂದು ಒಂದೇ ಹಂತದಲ್ಲಿ ಚುನಾವಣೆ ನಿಗದಿಯಾಗಿದೆ. ೨೩ರಂದು ಫಲಿತಾಂಶ ಬರಲಿದೆ. ಸದ್ಯ ಮಹಾರಾಷ್ಟçದಲ್ಲಿ ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಶಿವಸೇನಾ, ಬಿಜೆಪಿ ಹಾಗೂ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಪಕ್ಷಗಳ 'ಮಹಾಯುತಿ' ಸರ್ಕಾರ ಅಸ್ತಿತ್ವದಲ್ಲಿದೆ.

Next Article