ಏ. ೮ರ ನಂತರ ೨೫ ಜಿಲ್ಲೆಗಳಲ್ಲಿ ಮಳೆ
10:56 PM Apr 05, 2024 IST | Samyukta Karnataka
ಬೆಂಗಳೂರು: ಬಿರು ಬಿಸಿಲ ತಾಪಮಾನದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಕೊನೆಗೂ ಹವಾಮಾನ ಇಲಾಖೆ ಕೊಟ್ಟ ಮಾಹಿತಿಯಿಂದಾಗಿ ನಿಟ್ಟುಸಿರು ಬಿಡುವಂತಾಗಿದ್ದು, ಪ್ರಿಲ್ ೮ರ ನಂತರ ೨೫ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಏಪ್ರಿಲ್ ಮೊದಲ ವಾರದಲ್ಲಿ ದಾವಣಗೆರೆ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಮಳೆಯಾಗುತ್ತಿದ್ದು, ಕಾದ ಕಾವಲಿಯಂತಾಗಿದ್ದ ಭೂಮಿಗೆ ಸುರಿದ ವರುಣ ತಂಪೆರೆದಿದ್ದಾನೆ. ಇನ್ನೂ ಕರ್ನಾಟಕದ ೨೫ ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್ ೮ರ ಬಳಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏ. ೬ ರಂದು ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಜನತೆ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಏಪ್ರಿಲ್ ೮ ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.