ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಐತಿಹಾಸಿಕ ದಾಖಲೆ ಬರೆದ ಭಾರತ ಮಹಿಳಾ ತಂಡಕ್ಕೆ ಭರ್ಜರಿ ಜಯ

12:56 PM Dec 16, 2023 IST | Samyukta Karnataka

ಮುಂಬಯಿ: ಭಾರತ ಮಹಿಳಾ ಕ್ರಿಕೆಟ್‌ ತಂಡ ಇಂಗ್ಲೆಂಡ್ ತಂಡವನ್ನು 347 ರನ್‌ಗಳಿಂದ ಸೋಲಿಸಿ ಮಹಿಳಾ ಟೆಸ್ಟ್‌ನಲ್ಲಿ ಅತಿದೊಡ್ಡ ವಿಜಯವನ್ನು ದಾಖಲಿಸಿದೆ.
ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡೂ ವಿಭಾಗದಲ್ಲಿ ಉತ್ಕೃಷ್ಟ ಮಟ್ಟದ ಪ್ರದರ್ಶನ ತೋರಿ ದಾಖಲೆಯ 347 ರನ್ ಬೃಹತ್ ಅಂತರದ ಗೆಲುವು ಸಾಧಿಸಿದೆ. 479 ರನ್​ಗಳ ಗುರಿಯೊಂದಿಗೆ ದ್ವಿತೀಯ ಇನಿಂಗ್ಸ್​ ಆರಂಭಿಸಿದ ಇಂಗ್ಲೆಂಡ್ ಕೇವಲ 131 ರನ್​ಗಳಿಗೆ ಆಲೌಟ್ ಮಾಡುವ ಮೂಲಕ ಟೀಮ್ ಇಂಡಿಯಾ 347 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಮೂರನೇ ದಿನದಾಟದಲ್ಲಿ ದೀಪ್ತಿ ಹೊರತುಪಡಿಸಿ ಪೂಜಾ ವಸ್ತ್ರಾಕರ್ ಮೂರು ವಿಕೆಟ್ ಮತ್ತು ಕನ್ನಡತಿ ರಾಜೇಶ್ವರಿ ಗಾಯಕ್ವಾಡ್ ಎರಡು ವಿಕೆಟ್ ಪಡೆದಿದ್ದಾರೆ. ಮುಂಬೈನ ಡಿವೈ ಪಾಟೀಲ್​ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್​ ಮಹಿಳಾ ತಂಡದ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಭರ್ಜರಿ ಜಯ ಸಾಧಿಸಿದೆ.

Next Article