For the best experience, open
https://m.samyuktakarnataka.in
on your mobile browser.

ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ: ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು

06:39 PM Mar 15, 2024 IST | Samyukta Karnataka
ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ  ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು

ಮೈಸೂರು: ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ,
ಅವರು ಮೈಸೂರಿನಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿರುವ ಅವರು ನಮ್ಮ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು. ಬೆಲೆ ಏರಿಕೆಯ ಬೆಂಕಿಯಲ್ಲಿ ಬಿದ್ದವರ ನೆರವಿಗಾಗಿ ಗ್ಯಾರಂಟಿ ಯೋಜನೆ ಘೋಷಿಸಿದ್ದೂ ಆಯ್ತು, ಜಾರಿ ಮಾಡಿದ್ದೂ ಆಯ್ತು.
ನಮ್ಮ ಗ್ಯಾರಂಟಿಗಳು ಬಿಜೆಪಿಯವರ ಮನೆ ಬಾಗಿಲಿಗೂ ಮುಟ್ಟಿದೆ. ಕರ್ನಾಟಕ ಬಿಜೆಪಿ ಮತದಾರರೂ ಕಾಂಗ್ರೆಸ್ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ. ಇವರನ್ನು ಅವಮಾನಿಸಬೇಡಿ. ನಮ್ಮ ಗ್ಯಾರಂಟಿಗಳು ನಾಡಿನ‌ ಜನರ ಹಕ್ಕು.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯೇ ಆಗಲ್ಲ ಎಂದು ನೃಏಂದ್ರ ಮೋದಿ, ಬಸವರಾಜ ಬೊಮ್ಮಾಯಿ, ಆರ್‌ ಅಶೋಕ, ಬಿ ವಿಜಯೇಂದ್ರ, ಎಲ್ಲರೂ ಸುಳ್ಳಿನ ಮೇಲೆ ಸುಳ್ಳು ಹೇಳಿದರು. ನಾವು ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಆಗ ಗ್ಯಾರಂಟಿಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂಬ ಹೊಸ ಸುಳ್ಳು ಹಬ್ಬಿಸಿದರು. ಆದರೆ ನಾವು ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಹೊರತಾದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹಣ ಮೀಸಲಿಟ್ಟೆವು. ಹೀಗಾಗಿ ಕರ್ನಾಟಕ ಬಿಜೆಪಿಯ ಈ ಮಾತು ಕೂಡ ಸುಳ್ಳಾಯಿತು. ಹೀಗೆ ಬಿಜೆಪಿ ಮಂದಿ ಮೊದಲಿಗೆ ನಮ್ಮ ಗ್ಯಾರಂಟಿಗಳನ್ನು ಆಡಿಕೊಂಡು, ಸುಳ್ಳು ಹೇಳಿದರು. ಆದರೆ ನಮ್ಮ ಗ್ಯಾರಂಟಿಗಳು ಯಶಸ್ವಿಯಾಗಿ ಜಾರಿ ಆದ ಬಳಿಕ ನಮ್ಮದೇ ಗ್ಯಾರಂಟಿ ಸ್ಕೀಂಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ, ಬಿಜೆಪಿ ಸುಳ್ಳುಗಳನ್ನೇ ನುಡಿದಿದ್ದಾರೆ. ತಾವು ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬ ಭಾರತೀಯರ ಖಾತೆಗೆ 15 ಲಕ್ಷ ರೂ ಹಾಕುವುದಾಗಿ ನರೇಂದ್ರ ಮೋದಿ ಘೋಷಿಸಿದ್ದರು. 15 ಲಕ್ಷ ಇರಲಿ, 15 ಪೈಸೆನಾದ್ರೂ ಯಾರಿಗಾದರೂ ಹಾಕಿದ್ದಾರಾ? ಬಿಜೆಪಿಯವರಾಗಲಿ, ಮೋದಿಯವರಾಗಲೀ ಚುನಾವಣೆಯಲ್ಲಿ ಕೊಟ್ಟ ಭರವಸೆಗಳಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ? ಆಸ್ಪತ್ರೆ, ಕಾಲೇಜು, ಮಾರುಕಟ್ಟೆ, ರಸ್ತೆ, ನೀರು ಸೇರಿ ಮೈಸೂರಿನ ಎಲ್ಲಾ ಪ್ರಗತಿ ಕಾರ್ಯಕ್ರಮಗಳಿಗೆ ನಮ್ಮ ಸರ್ಕಾರ ನಿರಂತರವಾಗಿ ಅನುದಾನ ನೀಡುತ್ತಲೇ ಬಂದಿದೆ. ಈ ಬಜೆಟ್ ನಲ್ಲೂ ಹಣ ಮೀಸಲಿಟ್ಟಿದ್ದೇವೆ. ಮೈಸೂರು ಜಿಲ್ಲೆಯ ಅಭಿವೃದ್ಧಿಗೆ- ಮೈಸೂರು ಜನರ ಪ್ರಗತಿಗೆ ಕರ್ನಾಟಕ ಬಿಜೆಪಿ ಇವತ್ತಿನವರೆಗೂ ಒಂದೇ ಒಂದು ಕಾರ್ಯಕ್ರಮವನ್ನೂ ಮಾಡಲೇ ಇಲ್ಲ ಏಕೆ?