ಐವರು ಬಿಜೆಪಿ ಅಭ್ಯರ್ಥಿಗಳ ಅವಿರೋಧ ಆಯ್ಕೆ
ಬಿಜೆಪಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವ ಕಿರಣ್ ರಿಜುಜು ಅವರ ಹೆಗಲ ಮೇಲೆ ಬಿಜೆಪಿ ಅರುಣಾಚಲ ಪ್ರದೇಶದ ಜವಾಬ್ದಾರಿ ನೀಡಿದೆ.
ಅರುಣಾಚಲಪ್ರದೇಶ: 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಕುರಿತಂತೆ ಕೇಂದ್ರ ಸಚಿವ ಕಿರಣ್ ರಿಜಿಜು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕೊನೆಯ ದಿನ ಸಿಎಂ ನೇತೃತ್ವದಲ್ಲಿ ಬಿಜೆಪಿ 5 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರದಿಂದ ರಾಜ್ಯದಲ್ಲಿ ಅಗಾಧ ಅಭಿವೃದ್ಧಿಯಾಗಿದೆ ಎಂದು ಬರೆದುಕೊಂಡಿದ್ದಾರೆ.
ನಾಲ್ಕನೇ ಬಾರಿಗೆ ಅವಿರೋಧವಾಗಿ ಗೆಲ್ಲುವ ನಿರೀಕ್ಷೆಯಲ್ಲಿರುವ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಅವರ ಕ್ಷೇತ್ರ ಮುಕ್ತೋ ಜೊತೆಗೆ, ವಿವಿಧ ಕ್ಷೇತ್ರಗಳ ಇತರ ನಾಲ್ವರು ಅಭ್ಯರ್ಥಿಗಳು ಯಾವುದೇ ವಿರೋಧವನ್ನು ಎದುರಿಸದೆ ಗೆಲುವು ಸಾಧಿಸಲು ಸಜ್ಜಾಗಿದ್ದಾರೆ.
ಏತನ್ಮಧ್ಯೆ, ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವ ಕಿರಣ್ ರಿಜುಜು ಅವರ ಹೆಗಲ ಮೇಲೆ ಬಿಜೆಪಿ ಅರುಣಾಚಲ ಪ್ರದೇಶದ ಜವಾಬ್ದಾರಿ ನೀಡಿದೆ.
ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನವೇ ಅರುಣಾಚಲದಲ್ಲಿ 5 ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರಲ್ಲಿ ಮುಖ್ಯಮಂತ್ರಿ ಪೆಮಾ ಖಂಡು, ಉಪಮುಖ್ಯಮಂತ್ರಿ ಚೌನಾ ಮೀನಾ ಸೇರಿದಂತೆ 3 ಅಭ್ಯರ್ಥಿಗಳು ಸೇರಿದ್ದಾರೆ.