ಐಸಿಸಿ ಚಾಂಪಿಯನ್ಸ್ ಟ್ರೋಫಿ: ಭಾರತ Vs ಪಾಕ್ ಹಣಾಹಣಿ
12:51 PM Dec 23, 2024 IST
|
Samyukta Karnataka
ನವದೆಹಲಿ: ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಪಂದ್ಯಾವಳಿಯಲ್ಲಿ ಭಾರತ ತಂಡದ ಎಲ್ಲಾ ಪಂದ್ಯಗಳನ್ನು ಯುನೈಟೆಡ್ ಅರಬ್ ಎಮಿರೇಟ್ಸ್ UAE ನಲ್ಲಿ ನಡೆಸಲು ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ನಿರ್ಧರಿಸಿದೆ.
ಪಾಕಿಸ್ತಾನ ಕ್ರಿಕೆಟ್ ಮಂಡಳಿ ಯುಎಇಯನ್ನು ತಟಸ್ಥ ತಾಣವಾಗಿ ಆಯ್ಕೆ ಮಾಡಿಕೊಂಡಿದ್ದು, ಅಧಿಕೃತವಾಗಿ ಈ ಬಗ್ಗೆ ಐಸಿಸಿಗೆ ತನ್ನ ನಿರ್ಧಾರವನ್ನು ತಿಳಿಸಿದೆ. ಇದೀಗ ಭಾರತ-ಪಾಕಿಸ್ತಾನ ನಡುವಿನ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು ಯುಎಇಯಲ್ಲಿ ನಡೆಯಲಿವೆ, ಭದ್ರತೆಯ ದೃಷ್ಟಿಯಿಂದ ಪಾಕಿಸ್ತಾನದಲ್ಲಿ ಆಡಲು ಭಾರತ ತಂಡ ನಿರಾಕರಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
Next Article