ಐಹೊಳೆ ಗ್ರಾಮದ ಸ್ಮಾರಕಗಳ ಸಂರಕ್ಷಣೆಗೆ ಧರ್ಮಸ್ಥಳ ಮಂಜುನಾಥೇಶ್ವರ ಟ್ರಸ್ಟ್ ಜೊತೆ ಸರ್ಕಾರ ಒಡಂಬಡಿಕೆ
01:12 PM Mar 06, 2024 IST | Samyukta Karnataka
ಬೆಂಗಳೂರು: ಚಾಲುಕ್ಯ ವಾಸ್ತುಶಿಲ್ಪ ಕಲೆ ಹೊಂದಿರುವ ಐಹೊಳೆ ಗ್ರಾಮದ ಸ್ಮಾರಕಗಳ ಸಂರಕ್ಷಣೆ ಕೈಗೊಳ್ಳಲು ರಾಜ್ಯ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಚಾಲುಕ್ಯ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ನಡುವೆ ಒಪ್ಪಂದ ಮಾಡಿಕೊಳ್ಳಲಾಯಿತು ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಚಾಲುಕ್ಯ ವಾಸ್ತುಶಿಲ್ಪ ಕಲೆ ಹೊಂದಿರುವ ಐಹೊಳೆ ಗ್ರಾಮದ ಸ್ಮಾರಕಗಳ ಸಂರಕ್ಷಣೆ ಕೈಗೊಳ್ಳಲು ರಾಜ್ಯ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಚಾಲುಕ್ಯ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ನಡುವೆ ಒಪ್ಪಂದ ಮಾಡಿಕೊಳ್ಳಲಾಯಿತು ಎಂದಿದ್ದಾರೆ ಈ ವೇಳೆ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ, ಮಾಜಿ ಸಚಿವ ಅಭಯಚಂದ್ರ ಜೈನ್,ಹರ್ಷೆಂದ್ರ ಕುಮಾರ್, ಅಧಿಕಾರಿಗಳು ಉಪಸ್ಥಿತರಿದ್ದರು.