ಒಗ್ಗಟ್ಟಾಗದಿದ್ದರೆ ಹಿಂದೂಗಳಿಗೆ ಉಳಿಗಾಲವಿಲ್ಲ: ಶ್ರೀಜಡೆಸಿದ್ದೇಶ್ವರ ಸ್ವಾಮೀಜಿ ಎಚ್ಚರಿಕೆ
ಜಾತಿ ಸಂಕೋಲೆಯಿಂದ ಹೊರ ಬಂದು ಸಂಘಟಿತರಾಗಿ ದುಷ್ಟಶಕ್ತಿಗಳ ವಿರುದ್ಧ ಧ್ವನಿ ಎತ್ತಬೇಕು
ದಾವಣಗೆರೆ: ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಅಲ್ಪಸಂಖ್ಯಾತರ ಮೇಲೆ ದಾಳಿ ಹಾಗೂ ಧಾರ್ಮಿಕ ಮುಖಂಡರ ಬಂಧನ ವಿರೋದಿಸಿ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ದಾವಣಗೆರೆಯಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಜಡೆಸಿದ್ದೇಶ್ವರ ಸ್ವಾಮೀಜಿ, ಸಂಘಟನೆಯ ಕೊರತೆಯಿಂದ ಬಾಂಗ್ಲಾ, ಭಾರತ ಸೇರಿದಂತೆ ವಿದೇಶಗಳಲ್ಲಿಯೂ ಹಿಂದೂಗಳ ಮೇಲೆ ದಬ್ಬಾಳಿಕೆ, ದೌರ್ಜನ್ಯ ಹಾಗೂ ಸಾಧುಗಳ ಮೇಲೆ ಹಲ್ಲೆ ನಡೆಯುತ್ತಿವೆ. ನಾವು ಈಗಾದರೂ ಒಗ್ಗಟ್ಟಾಗದಿದ್ದರೆ ಹಿಂದೂಗಳಿಗೆ ಉಳಿಗಾಲವಿಲ್ಲ ಎಂದು ಎಚ್ಚರಿಕೆ ನೀಡಿದ ಸ್ವಾಮೀಜಿ, ಜಾತಿ ಸಂಕೋಲೆಯಿಂದ ಹೊರ ಬಂದು ಸಂಘಟಿತರಾಗಿ ದುಷ್ಟಶಕ್ತಿಗಳ ವಿರುದ್ಧ ಧ್ವನಿ ಎತ್ತಬೇಕೆಂದು ಕರೆ ನೀಡಿದರು.
ನಗರದ ಜಯದೇವ ವೃತ್ತದಿಂದ ಬೃಹತ್ ಮೆರವಣಿಗೆ ನಡೆಸಿದು ಹಿಂದೂ ಬಾಂಧವರು ಗಾಂಧಿ ವೃತ್ತದ ಮೂಲಕ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿದರು.
ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಮುಖ್ಯ ಸಚೇತಕ ಡಾ.ಎ.ಎಚ್.ಶಿವಯೋಗಿಸ್ವಾಮಿ, ಮಾಜಿ ಮೇಯರ್ ಅಜಯ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ್ ನಾಗಪ್ಪ, ಮಾಜಿ ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಸೇರಿದಂತೆ ಬಿಜೆಪಿ ಮುಖಂಡರು, ಇಸ್ಕಾನ್ ಟ್ರಸ್ಟ್ ಪದಾಧಿಕಾರಿಗಳು ಹಾಗೂ ಹಿಂದೂಗಳು ಭಾಗವಹಿಸಿದ್ದರು.