ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಒಳ ಮೀಸಲಾತಿಗೆ ನಮ್ಮ ಸರ್ಕಾರದ ವಿರೋಧವಿಲ್ಲ

01:05 PM Oct 05, 2024 IST | Samyukta Karnataka

ರಾಯಚೂರು: ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ, ಒಳ ಮೀಸಲಾತಿಗೆ ನಮ್ಮ ಸರ್ಕಾರದ ವಿರೋಧವಿಲ್ಲ. ಆದರೆ ಇದರ ಬಗ್ಗೆಯೂ ವರಿಷ್ಠರೊಂದಿಗೆ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು 00ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ
ಅವರು ಇಂದು ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಸಾಮಾಜಿಕ, ಶೈಕ್ಷಣಿಕ ಗಣತಿ ವರದಿಯನ್ನು ಈಗಾಗಲೇ ಸ್ವೀಕರಿಸಲಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ವರದಿಯಲ್ಲಿ ಸಣ್ಣಪುಟ್ಟ ದೋಷಗಳಿದ್ದರೆ ಅದನ್ನು ಸರಿಪಡಿಸುವ ಬಗ್ಗೆಯೂ ಪರಿಶೀಲಿಸಲಾಗುವುದು.

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹ: ಪಕ್ಷದ ರಾಜ್ಯ ಮಟ್ಟದ ವಿವಿಧ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಹಜ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳು ಅಗತ್ಯವಿಲ್ಲ. ವಿರೋಧಪಕ್ಷಗಳು ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡಿ ರಾಜೀನಾಮೆ ಬೇಡಿದರೆ, ರಾಜೀನಾಮೆ ಕೊಡಲು ಸಾಧ್ಯವಿಲ್ಲ. ಸುಳ್ಳು ಆರೋಪಗಳನ್ನು ಮಾಡಿದರೆ, ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ. ಜಿ.ಟಿ.ದೇವೇಗೌಡ ಅವರು ಜೆಡಿಎಸ್ ಪಕ್ಷದ ಕೋರ್ ಕಮಿಟಿಯ ಅಧ್ಯಕ್ಷ ಸ್ಥಾನದಲ್ಲಿದ್ದು, ಮುಡಾದ ಸದಸ್ಯರೂ ಆಗಿದ್ದಾರೆ. ಅವರು ಸತ್ಯ ಹೇಳಿರುವುದರಲ್ಲಿ ತಪ್ಪಿಲ್ಲ. ಈ ಪ್ರಕರಣದ ವಿರುದ್ಧ ವಿರೋಧ ಪಕ್ಷದವರು ಪಾದಯಾತ್ರೆಯನ್ನು ನಡೆಸುವುದು ಬೇಡ ಎಂದವರಲ್ಲಿ ಜಿ.ಟಿ ದೇವೇಗೌಡರು ಒಬ್ಬರು. ವಿರೋಧಪಕ್ಷದ ನಾಯಕರಾದ ಆರ್. ಅಶೋಕ್ ಅವರ ಮೇಲೆ ಎಫ್.ಐ.ಆರ್ ಆಗಿರುವುದರಿಂದ ಮೊದಲು ಅವರು ರಾಜೀನಾಮೆ ನೀಡಲಿ, ಜಮೀನು ಖರೀದಿ ಹಗರಣದಲ್ಲಿ ಅವರು ಈ ಹಿಂದೆ ಭಾಗಿಯಾಗಿದ್ದರು.

Tags :
#ರಾಯಚೂರು#ಸಿದ್ದರಾಮಯ್ಯ
Next Article