ಕಟೀಲ್‌ಗೆ ಮಹತ್ವದ ಜವಾಬ್ದಾರಿ ನೀಡಿದ ಹೈಕಮಾಂಡ್
11:29 AM Mar 28, 2024 IST | Samyukta Karnataka
ಬೆಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ನಳೀನ್ ಕುಮಾರ್ ಕಟೀಲ್ ಅವರಿಗೆ ಮಹತ್ವದ ಜವಾಬ್ದಾರಿಯನ್ನು ಬಿಜೆಪಿ ಹೈಕಮಾಂಡ್ ನೀಡಿದೆ.
ಬಿಜೆಪಿ ಕಾರ್ಯಕರ್ತನಾಗಿ, ಸಂಸದನಾಗಿ, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪಕ್ಷದಲ್ಲಿ ಸೇವೆ ಸಲ್ಲಿಸಿರುವ ನಳೀನ್ ಕುಮಾರ್ ಕಟೀಲ್‌ಗೆ ಈ ಬಾರಿ ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಕೇರಳದಲ್ಲಿ ಕಮಲ ಅರಳಿಸಬೇಕು ಎನ್ನುವ ಬಹುದೊಡ್ಡ ಜವಾಬ್ದಾರಿಯನ್ನು ಬಿಜೆಪಿ ಹೈಕಮಾಂಡ್ ನಳೀನ್ ಕುಮಾರ್ ಕಟೀಲ್‌ಗೆ ನೀಡಿದೆ.