ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕಡಬದಲ್ಲಿ ಹೆಚ್​1ಎನ್​1 ಸೋಂಕು ಪತ್ತೆ

07:36 PM Aug 07, 2024 IST | Samyukta Karnataka

ಮಂಗಳೂರು: ನಗರದ ಆಸ್ಪತ್ರೆಗೆ ದಾಖಲಾಗಿರುವ ಕಡಬ ಪೇರಡ್ಕದ ನಿವಾಸಿಯೊಬ್ಬರಿಗೆ ಹೆಚ್೧ಎನ್೧ ಧೃಡಪಟ್ಟಿದೆ.
ಈ ಬಗ್ಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದ ಪ್ರಭಾರ ಆಡಳಿತ ವೈದ್ಯಾಧಿಕಾರಿ ಡಾ. ತ್ರಿಮೂರ್ತಿ ಅವರು ಮಾಹಿತಿ ನೀಡಿ ವ್ಯಕ್ತಿಗೆ ಸೋಂಕು ದೃಢಪಟ್ಟಿರುವುದು ನಿಜ ಅವರು ಗುಣಮುಖರಾಗುತ್ತಿದ್ದಾರೆ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.
ಪುತ್ತೂರು ತಾಲೂಕು ವೈದ್ಯಾಧಿಕಾರಿ ಡಾ.ದೀಪಕ್ ಅವರು ಪ್ರತಿಕ್ರಿಯಿಸಿ, ಜ್ವರದಿಂದ ಆಸ್ಪತ್ರೆಗೆ ದಾಖಲಾದ ಕಡಬ ಪೇರಡ್ಕ ನಿವಾಸಿಯೋರ್ವರಿಗೆ ಹೆಚ್೧ಎನ್೧ ಸೋಂಕು ಧೃಡಪಟ್ಟಿದೆ. ಆದರೆ ಪ್ರಸ್ತುತ ಅವರು ಆರೋಗ್ಯವಾಗಿದ್ದಾರೆ ಎಂದಿದ್ದಾರೆ.

ಸೋಂಕು ಹೇಗೆ ತಗುಲಿದೆ ಎಂಬ ಬಗ್ಗೆ ಇಲಾಖಾಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ. ಸೋಂಕಿತ ವ್ಯಕ್ತಿ ತನ್ನ ಅಣ್ಣನ ಮನೆಗೆ ಹೋಗಿದ್ದರು ಎಂದಿದ್ದು ಅವರಿಗೂ ಜ್ವರ ಕಾಣಿಸಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಅವರ ಮೇಲೂ ನಿಗಾ ಇಡಲಾಗಿದೆ ಎಂದು ತಿಳಿಸಿದರು.
ಪ್ರಸ್ತುತ ಬೇಕಾದಷ್ಟು ಟ್ಯಾಮೀಪ್ಲೂ ಮಾತ್ರೆಗಳು ಲಭ್ಯವಿದೆ. ಇದು ಗುಣವಾಗುವ ಕಾಯಿಲೆಯಾಗಿರುವುದರಿಂದ ಜನರು ಭಯಪಡುವ ಅಗತ್ಯವಿಲ್ಲ ಆದರೆ ಎಚ್ಚರಿಕೆ ಅಗತ್ಯ. ಕಡಬ ತಾಲೂಕಿನಲ್ಲಿ ಈ ಒಂದು ತಿಂಗಳ ಹಿಂದೆ ನೆಲ್ಯಾಡಿ ಪರಿಸರದಲ್ಲಿ ಒಬ್ಬರಿಗೆ ಈ ರೋಗ ಕಾಣಿಸಿಕೊಂಡಿತ್ತು. ಅವರು ಈಗ ಸಂಪೂರ್ಣ ಆರೋಗ್ಯವಾಗಿದ್ದಾರೆ. ಕಡಬ, ಉಪ್ಪಿನಂಗಡಿ ಪರಿಸರಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜ್ವರ ಇದೆ. ಆದರೆ ಅದೆಲ್ಲವೂ ಹೆಚ್೧ಎನ್೧ ಜ್ವರವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕಡಬದ ಕೋಡಿಂಬಾಳದ ಕುಕ್ಕೆರೆಬೆಟ್ಟು ಎಂಬಲ್ಲಿ ಆ. ೫ರಂದು ಮಹಿಳೆಯೊಬ್ಬರು ಮೃತಪಟ್ಟಿದ್ದು, ಅವರು ಜ್ವರದಿಂದಲೇ ಮೃತಪಟ್ಟಿದ್ದಾರೆ ಎನ್ನುವುದು ಇನ್ನೂ ಧೃಡಪಟ್ಟಿಲ್ಲ. ವೈದ್ಯಕೀಯ ವರದಿ ಬಂದ ಬಳಿಕವಷ್ಟೇ ಯಾವ ಕಾರಣದಿಂದಾಗಿ ಅವರು ಮೃತಪಟ್ಚಿದ್ದಾರೆ ಎನ್ನುವುದು ತಿಳಿದು ಬರಲಿದೆ ಎಂದು ತಾಲೂಕು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

Tags :
H1N1ಕಡಬಸೋಂಕು
Next Article