ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕಣಿವೆ ನಾಡಲ್ಲಿ ರಾಷ್ಟ್ರಪತಿ ಆಳ್ವಿಕೆ ವಾಪಸ್‌

11:22 AM Oct 14, 2024 IST | Samyukta Karnataka

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ನೂತನ ಸರ್ಕಾರ ರಚನೆ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶದಿಂದ ರಾಷ್ಟ್ರಪತಿ ಆಳ್ವಿಕೆ ಹಿಂಪಡೆಯಲಾಗಿದೆ.
ಈ ಕುರಿತಂತೆ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ 6 ವರ್ಷಗಳ ಬಳಿಕ ರಾಷ್ಟ್ರಪತಿ ಆಡಳಿತವನ್ನು ಹಿಂಪಡೆಯಲಾಗಿದೆ. ಕಣಿವೆಯಲ್ಲಿ 10 ವರ್ಷಗಳ ಬಳಿಕ ವಿಧಾನಸಭೆ ಚುನಾವಣೆ ನಡೆದು 49 ಸ್ಥಾನಗಳನ್ನು ಪಡೆಯುವ ಮೂಲಕ ನ್ಯಾಷನಲ್​ ಕಾನ್ಫರೆನ್ಸ್​​ ಮೈತ್ರಿಕೂಟ ಜಯಭೇರಿ ಭಾರಿಸಿದೆ.ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, 2019 (2019 ರ 34) ಸೆಕ್ಷನ್ 73 ರ ಮೂಲಕ ನೀಡಲಾದ ಅಧಿಕಾರಗಳ ಅನುಷ್ಠಾನದಲ್ಲಿ, ಭಾರತದ ಸಂವಿಧಾನದ 239 ಮತ್ತು 239ಎ ವಿಧಿಗಳೊಂದಿಗೆ ಓದಲಾಗಿದೆ. 31ನೇ ಅಕ್ಟೋಬರ್ 2019ರ ಆದೇಶವು ಜಮ್ಮು ಮತ್ತು ಕೇಂದ್ರಾಡಳಿತ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, 2019ರ ಸೆಕ್ಷನ್ 54 ರ ಅಡಿಯಲ್ಲಿ ಮುಖ್ಯಮಂತ್ರಿ ಅಧಿಕಾರ ಸ್ವೀಕಾರಕ್ಕೂ ಮುನ್ನವೇ ಕಾಶ್ಮೀರದ ಮೇಲೆ ರಾಷ್ಟ್ರಪತಿ ಆಳ್ವಿಕೆ ಅಧಿಕಾರವನ್ನು ಹಿಂಪಡೆಯಲಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಮಾಡಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ

Tags :
#JammuKashmir
Next Article