ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕನಕದಾಸರು ವಿಶ್ವಮಾನವರಾಗಿದ್ದರು

01:38 PM Nov 18, 2024 IST | Samyukta Karnataka

ಬೆಂಗಳೂರು: ಕನಕದಾಸರು ಸಂತರಷ್ಟೇ ಅಲ್ಲದೇ ದಾರ್ಶನಿಕರೂ, ಸಮಾಜ ಸುಧಾರಕರೂ ಆಗಿದ್ದರು. ವಿಶ್ವಮಾನವರೂ ಆಗಿದ್ದ ಅವರ ಜಯಂತ್ಯೋತ್ಸವವನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಕನಕದಾಸ ಜಯಂತಿ ಅಂಗವಾಗಿ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಕ್ತ ಕನಕದಾಸ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ. ಕನಕದಾಸರು ಹಾವೇರಿ ಜಿಲ್ಲೆಯ ಬಾಡ ಗ್ರಾಮದಲ್ಲಿ ಜನಿಸಿದರು. ಕಾಗಿನೆಲೆ ಅವರ ಕರ್ಮಭೂಮಿ. ಕಾವ್ಯ, ಕೀರ್ತನೆಗಳನ್ನು ರಚನೆ ಮಾಡಿದ್ದರು ಎಂದು ವಿವರಿಸಿ ನಾಡಿನ ಎಲ್ಲಾ ಜನರಿಗೂ ಕನಕ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.

Tags :
bangalorekanakdassiddaramaih
Next Article