ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕನಿಷ್ಠ ನಿರೀಕ್ಷೆಗಳನ್ನೂ ಇಟ್ಟುಕೊಳ್ಳದ ಸುಳಿವು

03:39 PM Feb 12, 2024 IST | Samyukta Karnataka

ಬೆಂಗಳೂರು: ಜನರೂ ಕನಿಷ್ಠ ನಿರೀಕ್ಷೆಗಳನ್ನೂ ಇಟ್ಟುಕೊಳ್ಳದ ಸುಳಿವು ರಾಜ್ಯಪಾಲರ ಭಾಷಣದಲ್ಲಿ ಸ್ಪಷ್ಟವಾಗಿ ಗೋಚರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಬಜೆಟ್ ಅಧಿವೇಶನದ ರಾಜ್ಯಪಾಲರ ಭಾಷಣ ಅತ್ಯಂತ ನೀರಸವಾಗಿದ್ದು , ಸುಳ್ಳುಗಳ ಕಂತೆಯನ್ನೇ ತುರುಕಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಗ್ಯಾರಂಟಿ ಸುತ್ತ ಗಿರಕಿ ಹೊಡೆಯುವುದನ್ನು ಬಿಟ್ಟರೆ ಇನ್ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ ಎನ್ನುವುದು ರಾಜ್ಯಪಾಲರ ಭಾಷಣದಲ್ಲಿ ಸ್ಪಷ್ಟವಾಗಿ ಗೋಚರವಾಗಿದೆ.

ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಮಾಡಲಾಗದೆ ಗೊಂದಲದಲ್ಲಿ ಮುಳುಗಿರುವ ಸರ್ಕಾರ ಭವಿಷ್ಯದಲ್ಲಾದರೂ ಹೊಸ ಭರವಸೆ ಮೂಡಿಸುವ ಮಾತುಗಳನ್ನು ರಾಜ್ಯಪಾಲರಿಂದ ಹೇಳಿಸಿಲ್ಲ. ಬಡವರು, ರೈತರು, ನಿರುದ್ಯೋಗಿಗಳ ಪಾಲಿಗೆ ಕಂಟಕವಾಗಿರುವ ಈ ಸರ್ಕಾರ ಉದ್ಯಮಿಗಳು ಹಾಗೂ ಸ್ವಾವಲಂಬಿಗಳಿಗೆ ಹಾಗೂ ಸ್ವಂತ ಮನೆ ಹೊಂದುವ ಸೂರು ರಹಿತರಿಗೆ, ತೆರಿಗೆ ಹಾಗೂ ಮುದ್ರಾಂಕ ಶುಲ್ಕಗಳನ್ನು ಏರಿಸುವ ಮೂಲಕ ಆರ್ಥಿಕ ವ್ಯವಹಾರಗಳಿಗೆ ಧಕ್ಕೆ ತಂದೊಡ್ಡಿರುವುದು, ಮುಂದಿನ ದಿನಗಳಲ್ಲಿ ಕರ್ನಾಟಕದ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ.

ಸದ್ಯ ಮಂಡಿಸಲಿರುವ ಬಜೆಟ್‌ನಲ್ಲಿ ಯಾವ ವರ್ಗದ ಜನರೂ ಕನಿಷ್ಠ ನಿರೀಕ್ಷೆಗಳನ್ನೂ ಇಟ್ಟುಕೊಳ್ಳದ ಸುಳಿವು ರಾಜ್ಯಪಾಲರ ಭಾಷಣದಲ್ಲಿ ಸ್ಪಷ್ಟವಾಗಿ ಗೋಚರವಾಗಿದೆ ಎಂದಿದ್ದಾರೆ.

Next Article