For the best experience, open
https://m.samyuktakarnataka.in
on your mobile browser.

ಕನ್ನಡಿಗರಿಗೆ ಇದು ಅನ್ಯಾಯವಲ್ಲವೇ?

01:27 PM Oct 13, 2024 IST | Samyukta Karnataka
ಕನ್ನಡಿಗರಿಗೆ ಇದು ಅನ್ಯಾಯವಲ್ಲವೇ

ಬೆಂಗಳೂರು: ಕಳೆದ ಐದು ವರ್ಷಗಳಲ್ಲಿ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಸುಮಾರು 60 ಸಾವಿರ ಕೋಟಿ ರೂ. ಅನ್ಯಾಯವಾಗಿದೆ. ಬಿಜೆಪಿ ಸಂಸದರು ಕರ್ನಾಟಕದ ಪರ ಧ್ವನಿ ಎತ್ತದೆ, ರಾಜ್ಯದ ಜನರಿಗೆ ದ್ರೋಹವೆಸಗುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಕೇಂದ್ರದಿಂದ ರಾಜ್ಯಕ್ಕೆ ಕೇವಲ 6,498 ಕೋಟಿ ರೂ.ಗಳ ತೆರಿಗೆ ಪಾಲು ಬಂದಿದ್ದು, ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ₹31,000 ಕೋಟಿಗೂ ಹೆಚ್ಚು ಉತ್ತರ ಪ್ರದೇಶ ರಾಜ್ಯಕ್ಕೆ ನೀಡಲಾಗಿದೆ. ಹೆಚ್ಚು ತೆರಿಗೆ ಪಾವತಿಸುವ ಕನ್ನಡಿಗರಿಗೆ ಇದು ಅನ್ಯಾಯವಲ್ಲವೇ? ಈ ವರ್ಷ ದಸರಾ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ. ದಸರಾ ಉತ್ಸವ ಯಶಸ್ವಿಯಾಗಲು ಕಾರಣರಾದ ಜಿಲ್ಲಾಮಂತ್ರಿಗಳು ಹಾಗೂ ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೂ ಅಭಿನಂದನೆಗಳು. ರಾಜ್ಯದಲ್ಲಿ ಸಾಕಷ್ಟು ಮಳೆ, ಬೆಳೆಯಾಗಿದ್ದರಿಂದ ಈ ಬಾರಿ ನಾಡಹಬ್ಬ ದಸರಾವನ್ನು ಅದ್ಧೂರಿಯಾಗಿ ಆಚರಿಸಲಾಗಿದೆ. ಜನರು ದಸರಾದಲ್ಲಿ ಸಂತೋಷದಿಂದ ಭಾಗವಹಿಸಿದ್ದು, ಸರ್ಕಾರದ ಶ್ರಮ ಸಾರ್ಥಕವಾಗಿದೆ ಎಂದಿದ್ದಾರೆ.

Tags :