For the best experience, open
https://m.samyuktakarnataka.in
on your mobile browser.

ಕನ್ನಡ ಸಾಹಿತ್ಯ ಸಮ್ಮೇಳನ: ಆನ್ ಲೈನ್ ನೊಂದಣಿಗೆ ಚಾಲನೆ

12:06 PM Nov 17, 2024 IST | Samyukta Karnataka
ಕನ್ನಡ ಸಾಹಿತ್ಯ ಸಮ್ಮೇಳನ  ಆನ್ ಲೈನ್ ನೊಂದಣಿಗೆ ಚಾಲನೆ

ಈ ಬಾರಿ ವಿನೂತನವಾಗಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನೊಂದಣಿಯನ್ನು ಆನ್ ಲೈನ್ ಮೂಲಕ ಮಾಡಲಾಗುತ್ತಿದ್ದು, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್‌ ಚಲುವರಾಯಸ್ವಾಮಿ ಅವರು ಇಂದು ಕೆ.ಆರ್.ಎಸ್ ನ ರಾಯಲ್ ಆರ್ಕಿಡ್ ನಲ್ಲಿ ಚಾಲನೆ ನೀಡಿದರು.

ನೊಂದಣಿಗೆ ರೂ 600 ನಿಗದಿ ಈ ಬಾರಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರತಿನಿಧಿಯಾಗಿ ನೊಂದಣಿಯಾಗಿ ಭಾಗವಹಿಸಲು ರೂ 600 ನಿಗದಿಯಾಗಿರುತ್ತದೆ.

ಕನ್ನಡ ಸಾಹಿತ್ಯ ಪರಿಷತ್ತಿನ ವೆಬ್ ಸೈಟ್ ನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಪಡೆದಿರುವವರು ನೊಂದಣಿ ಮಾಡಿಕೊಳ್ಳಲು ಇಂದಿನಿಂದ 20 ದಿನಗಳ ಕಾಲ ಅವಕಾಶ ನೀಡಲಾಗಿದೆ. ಆನ್ ಲೈನ್ ನಲ್ಲಿ ಅರ್ಜಿ ಭರ್ತಿ ಮಾಡಿದ ನಂತರ ಹಣ‌ ಪಾವತಿ ಕೂಡ ಆನ್‌ಲೈನ್ ಮೂಲಕ‌ ಮಾಡಬೇಕಿರುತ್ತದೆ.

ಜಿಲ್ಲಾಧಿಕಾರಿ ಡಾ: ಕುಮಾರ ಅವರು ಮಾತನಾಡಿ ನೊಂದಣಿಯಾಗುವವರಿಗೆ ಆನ್ ಲೈನ್ ಮೂಲಕ ವಸತಿ ಒದಗಿಸುವ ಸ್ಥಳ, ವಿಳಾಸ, ನೋಡಲ್ ಅಧಿಕಾರಿಗಳ ಮೊಬೈಲ್ ಸಂಖ್ಯೆ, ಹಾಗೂ ಆನ್ ಲೈನ್ ನಲ್ಲೇ ಫೋಟೋ ಸಹಿತ ಗುರುತಿನ ಚೀಟಿ ಒದಗಿಸಲಾಗುವುದು ಎಂದರು.

87 ನೇ ಅಖಿಲ ಭಾರತ

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ, ಶ್ರೀರಂಗಪಟ್ಟಣ ವಿಧಾನ ಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕರಾದ ಮೀರಾ ಶಿವಲಿಂಗಯ್ಯ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ಕೃಷ್ಣೇಗೌಡ ಹುಸ್ಕೂರು, ಹರ್ಷ ಪೆನ್ನದೊಡ್ಡಿ, ಅಪ್ಪಾಜಪ್ಪ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು

Tags :