ಕರ್ತವ್ಯನಿರತ ಪೊಲೀಸ್ ಪೇದೆಗೆ ಹಾರ್ಟ್ ಅಟ್ಯಾಕ್
04:22 PM Oct 02, 2024 IST
|
Samyukta Karnataka
ಬೀದರ್: ನೂತನ ನಗರ ಠಾಣೆಯ ಪೇದೆ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ತಳಮಾಳ ಗ್ರಾಮದ ಪೇದೆ ಚಂದ್ರಶೇಖರ (28ವರ್ಷ) ಸಾವನ್ನಪ್ಪಿದವರು. 2018ರ ಬ್ಯಾಚ್ ನ ಪೇದೆಯಾಗಿರುವ ಚಂದ್ರಶೇಖರ ಕಳೆದ 5 ವರ್ಷಗಳಿಂದ ನಾಗರಿಕ ಪೊಲೀಸ್ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರು. ಬೀದರ್‌ನ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದನು. ಆದರೆ, ಗಾಂಧಿ ಜಯಂತಿಯ ಹಿನ್ನೆಲೆಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಪೊಲೀಸ್ ಆನ್ ಡ್ಯೂಟಿಯಲ್ಲಿದ್ದಾಗಲೇ ಹಾರ್ಟ್ ಅಟ್ಯಾಕ್‌ಗೆ ಒಳಗಾಗಿದ್ದಾರೆ. ಕೂಡಲೇ ಅವರನ್ನು ಬೆನ್ನಲ್ಲೆ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ಮುಂದಾಗಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಹೃದಯಾಘಾತದಿಂದ ತೀವ್ರವಾಗಿ ಅಸ್ವಸ್ಥ ರಾಗಿದ್ದ ಅವರು ಬ್ರಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
Next Article