ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕರ್ನಾಟಕದಲ್ಲೂ ಬೇಕಿದೆ ಬುಲ್ಡೋಜರ್ ಕಾರ್ಯಾಚರಣೆ

12:56 PM Sep 13, 2024 IST | Samyukta Karnataka

ಬೆಂಗಳೂರು: ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ಮುಸ್ಲಿಂ ಮತಾಂಧರು ನಡೆಸಿದ ಕೋಮುದಳ್ಳುರಿಯಲ್ಲಿ ಅಂಗಡಿ, ಮುಂಗಟ್ಟುಗಳು, ಸರಕು-ಸರಂಜಾಮುಗಳು ಸೇರಿದಂತೆ ಒಟ್ಟು ಸುಮಾರು 25 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಆಸ್ತಿ-ಪಾಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆತ, ವಾಹನಗಳಿಗೆ ಬೆಂಕಿ ಹಚ್ಚುವುದು, ಶೋರೂಂ ಗಳಲ್ಲಿ ದ್ವಿಚಕ್ರ ವಾಹನ ಕಳ್ಳತನ ಮುಂತಾದ ದುಷ್ಕೃತ್ಯ ಎಸಗಿದ ಪುಂಡರನ್ನ ಪತ್ತೆ ಹಚ್ಚಿ, ಉತ್ತರ ಪ್ರದೇಶದ ಮಾದರಿಯಲ್ಲಿ ಅವರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ ಮಾಡಿದರೆ ಮಾತ್ರ ಇಂತಹವರಿಗೆ ತಕ್ಕ ಪಾಠ ಕಲಿಸಲು ಸಾಧ್ಯ, ಇಂತಹ ವಿಕೃತ ಮನಸ್ಥಿತಿಗೆ ಪೂರ್ಣವಿರಾಮ ಇಡಲು ಸಾಧ್ಯ. ನಾಗರಿಕರನ್ನು ರಕ್ಷಿಸಬೇಕಾದ ಸರ್ಕಾರವೇ ಇಂತಹ ಪೂರ್ವನಿಯೋಜಿತ ಕೋಮುಗಲಭೆಗಳನ್ನ ಸಣ್ಣ ಘಟನೆ, ಆಕಸ್ಮಿಕ ಘಟನೆ ಎಂದು ನಿರ್ಲಕ್ಷ್ಯ ಮಾಡಿದರೆ ಜನ ಸಾಮಾನ್ಯರ ರಕ್ಷಣೆ ಮಾಡುವವರು ಯಾರು? ಜನಸಾಮಾನ್ಯರು ನೆಮ್ಮದಿಯಿಂದ ತಮ್ಮ ಉದ್ಯೋಗ, ವ್ಯಾಪಾರ ಮಾಡುವುದಾದರೂ ಹೇಗೆ? ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಈ ಮತಾಂಧರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದೊಂದು ದಿನ ನಮ್ಮ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಎಂಬುದೇ ಆಕಸ್ಮಿಕ, ಅಪರೂಪವಾಗುವ ದಿನ ಬಹಳ ದೂರವಿಲ್ಲ ಎಂದಿದ್ದಾರೆ.

Tags :
#Bjp#Congress#Rashoka#ಗಲಾಟೆ#ನಾಗಮಂಗಲ
Next Article