ಕರಾಳ ಇತಿಹಾಸ ಬರೆಯಲೆಂದೇ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್
ಶಿವಮೊಗ್ಗ: ಕರ್ನಾಟಕದ ರಾಜಕಾರಣಕ್ಕೆ ಕರಾಳ ಇತಿಹಾಸ ಬರೆಯಲೆಂದೇ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಎಂದು ಕಿಡಿಕಾರಿದ್ದಾರೆ.
ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ವಿರುದ್ಧ ಹಿಂದಿನ ಬಿಜೆಪಿ ಸರಕಾರ ಸಿಬಿಐ ತನಿಖೆ ನಡೆಸಲು ನೀಡಿದ್ದ ಅನುಮತಿಯನ್ನು ರದ್ದುಗೊಳಿಸಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ ಎಂಬ ವಿಚಾರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಸಂವಿಧಾನದ ಘನತೆ, ಪ್ರಜಾಪ್ರಭುತ್ವದ ಮೌಲ್ಯ ಎತ್ತಿ ಹಿಡಿಯುವ ನಿಟ್ಟಿನಲ್ಲಿ ತನ್ನದಲ್ಲದ ತಪ್ಪಿಗೂ ನೈತಿಕ ಹೊಣೆ ಹೊತ್ತು ಅಧಿಕಾರ ತ್ಯಾಗಮಾಡಿದ ಹಲವು ಮಹನೀಯರು ಗೌರವದ ರಾಜಕಾರಣಕ್ಕೆ ಇತಿಹಾಸ ಬರೆದು ಹೋಗಿದ್ದಾರೆ. ಕರ್ನಾಟಕದ ರಾಜಕಾರಣಕ್ಕೆ ಕರಾಳ ಇತಿಹಾಸ ಬರೆಯಲೆಂದೇ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ತನ್ನ ಸಂಪುಟ ಸದಸ್ಯ ಡಿ. ಕೆ. ಶಿವಕುಮಾರ ಮೇಲಿರುವ ಸಿಬಿಐ ತನಿಖೆಯ ಕೇಸ್ ಹಿಂತೆಗೆದು ಕೊಳ್ಳುವ ನಿಲುವು ತಳೆದಿರುವುದು ಸಾಂವಿಧಾನಿಕ ಹಾಗೂ ಪ್ರಜಾತಂತ್ರ ವ್ಯವಸ್ಥೆಯ ಮೇಲೆ ಸವಾರಿ ಮಾಡಿದ ಕ್ರಮವಾಗಿದೆ ಎಂದು ಬರೆದುಕೊಂಡಿದ್ದಾರೆ.