ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕರ್ನಾಟಕ ಪಬ್ಲಿಕ್ ಸ್ಕೂಲ್‌ಗೆ `ಗ್ರಹಣ'

01:29 AM Jun 01, 2024 IST | Samyukta Karnataka

ನಾಗರಾಜ ಮದುಭಾವಿ
ಗುಡಗೇರಿ (ತಾ-ಕುಂದಗೋಳ): ಬದುಕನ್ನು ಬೆಳಗಿಸುವ ಸರ್ಕಾರಿ ಶಾಲೆಗಳು ಬಡವರಿಗೆ ಹಾಗೂ ಮಧ್ಯಮ ವರ್ಗದವರಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ತಾಲೂಕಿನಲ್ಲಿ ಮೊದಲಿಗೆ ಗುಡಗೇರಿ ಗ್ರಾಮದಲ್ಲಿ ಆರಂಭವಾದ ಏಕೈಕ ಇಂಗ್ಲಿಷ್ ಮಾಧ್ಯಮ ಕರ್ನಾಟಕ ಪಬ್ಲಿಕ್ ಶಾಲೆಗೆ ಗ್ರಹಣ ಆವರಿಸಿದೆ.
ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಭಾಷೆಯನ್ನೂ ಪರಿಣಾಮಕಾರಿ ಬೋಧನೆಗೆ ಆದ್ಯತೆ ಇರಲಿ ಎನ್ನುವ ಉದ್ದೇಶದಿಂದ ಪೂರ್ವ ಪ್ರಾಥಮಿಕ ತರಗತಿಯಿಂದ ದ್ವಿತೀಯ ಪಿಯುಸಿ ವರೆಗೆ ಒಂದೇ ಸೂರಿನಡಿ ಶಿಕ್ಷಣವನ್ನು ನೀಡಲು ಪ್ರಾರಂಭಿಸಲಾಗಿದೆ.
ಇದೇ ಉದ್ದೇಶದಡಿ ಇಲ್ಲಿ ಇಂಗ್ಲಿಷ್ ಮಾಧ್ಯಮ ಕರ್ನಾಟಕ ಪಬ್ಲಿಕ್ ಶಾಲೆಯ (ಕೆಪಿಎಸ್) ತರಗತಿಗಳು ಗ್ರಾಮದ ಸ.ಹಿ.ಪ್ರಾ. ಕನ್ನಡ ಹೆಣ್ಣು ಮಕ್ಕಳ ಶಾಲೆ(ಕೆಜಿಎಸ್)ಯಲ್ಲಿ ನಡೆಯುತ್ತಿದ್ದವು.
ಆದರೆ ಈಗ, ೧ ರಿಂದ ೫ನೇ ತರಗತಿ ಇಂಗ್ಲಿಷ್ ಮಾಧ್ಯಮವನ್ನು ಕೆಪಿಎಸ್‌ಸಿ ಶಾಲೆಯಲ್ಲಿ ನಡೆಸುವಂತೆ ಇಲಾಖೆಯ ಆದೇಶ ಹಿನ್ನಲೆ ಹಸ್ತಾಂತರ ಪ್ರಕ್ರಿಯೆ ಪ್ರಗತಿಯಲ್ಲಿದೆ. ಆದರೆ, ಕೆಪಿಎಸ್ ಶಾಲೆಯಲ್ಲಿ ಕೊಠಡಿಗಳ ಸಮಸ್ಯೆಯಿಂದ "ಬನ್ನಿ ಮಕ್ಕಳೇ ಸರ್ಕಾರಿ ಶಾಲೆಗೆ "ಎನ್ನುವ ಪರಿಸ್ಥಿತಿಯಲ್ಲಿ ಇಲ್ಲದಂತಾಗಿದೆ.
ಇದರಿಂದ ಶಿಕ್ಷಕರು ಹಾಗೂ ಪೋಷಕರಲ್ಲಿ ಗೊಂದಲ ಸೃಷ್ಟಿಯಾಗಿದೆ. ಶಾಲೆಗಳು ಪ್ರಾರಂಭವಾಗಿದೆ. ಆದರೆ, ಮೇಲಧಿಕಾರಿಗಳು ಸಮಸ್ಯೆಗೆ ಪರಿಹಾರ ಕಂಡು ಹಿಡಿಯುವ ಪ್ರಯತ್ನ ಮಾಡಿಲ್ಲ. ಮಕ್ಕಳ ಶಿಕ್ಷಣಕ್ಕೆ ಇದರಿಂದ ತೊಂದರೆಯಾಗಲಿದೆ ಎಂಬ ಆತಂಕವನ್ನು ಪೋಷಕರು ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದೆಡೆ ಶಿಕ್ಷಕ ಸಮೂಹ ದಿಕ್ಕು ತೋಚದಂತಾಗಿದೆ.
ಶೀಘ್ರ ಈ ಸಮಸ್ಯೆಯನ್ನು ಅರಿತು ಸರಿಪಡಿಸುವಂತೆ ಶಾಸಕರು,ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಡಿಡಿಪಿಐ ಅವರಿಗೆ ಪೋಷಕ ಬಳಗ ಮನವಿ ಮಾಡಿದೆ.

Next Article