ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕಲಬುರಗಿಗೂ ಕಾಲಿಟ್ಟ ಕೋವಿಡ್-19 ರೂಪಾಂತರಿ ವೈರಸ್

12:18 PM Dec 26, 2023 IST | Samyukta Karnataka

ಕಲಬುರಗಿ: ಕೋವಿಡ್ ರೂಪಾಂತರಿ ತಳಿ ಜಿಲ್ಲೆಗೂ ಕಾಲಿಟ್ಟಿದೆ. ಇದರಿಂದ ಜನರಲ್ಲಿ‌ ಮತ್ತೊಮ್ಮೆ ಆತಂಕ ಶುರುವಾಗಿದೆ.
ಕೋವಿಡ್-19 ಟೆಸ್ಟ್ ಮಾಡಿದ ಮೊದಲ ದಿನವೇ ಓರ್ವ ಬಾಲಕಿಯಲ್ಲಿ ಪತ್ತೆಯಾದ ಬಗ್ಗೆ ಆರೋಗ್ಯ ಇಲಾಖೆ ದೃಢಪಡಿಸಿದೆ. ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದ್ದಾರೆ. ಮಹಾರಾಷ್ಟ್ರದ ಮುಂಬೈನಿಂದ ಬಂದಿದ್ದ ಬಾಲಕಿಯಲ್ಲಿ ಕೋವಿಡ್ ಸೋಂಕು ದೃಢ ಪಟ್ಟಿದೆ. 8 ವರ್ಷದ ಬಾಲಕಿಯು ಕ್ಷಯರೋಗ ಚಿಕಿತ್ಸೆಗಾಗಿ ಡಿ.23 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಳು. ನಿರಂತರವಾಗಿ ಜ್ವರ ಇದ್ದಿದ್ದರಿಂದ ಕೋವಿಡ್-19 ಟೆಸ್ಟ್ ಮಾಡಲಾಗಿತ್ತು.
ಈ ವೇಳೆ ಸೋಂಕು ತಗುಲಿರೋದು ದೃಢಪಟ್ಟಿದೆ. ಬಾಲಕಿಯ ಸಂಪರ್ಕಕ್ಕೆ ಬಂದವರನ್ನು ಐಸೋಲೇಷನ್ ಮಾಡಲು ಡಿಎಚ್‌ಓ ಅವರು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Next Article