ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕಸ್ತೂರಿ ರಂಗನ್ ವರದಿ: ತಿರಸ್ಕರಿಸುವ ಬಗ್ಗೆ ಚರ್ಚಿಸಿ ತೀರ್ಮಾನ

07:50 PM Aug 02, 2024 IST | Samyukta Karnataka

ಕೊಡಗು: ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ನಿಲುವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಕೊಡಗು ಜಿಲ್ಲೆಯಲ್ಲಿ ಭೂ ಕುಸಿತ ಸಂಭವಿಸಿದ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ನಿಲುವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುವುದು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ₹746 ಕೋಟಿ ಮತ್ತು ಮಡಿಕೇರಿ ಜಿಲ್ಲಾ ಪಿಡಿ ಖಾತೆಯಲ್ಲಿ ₹46 ಕೋಟಿ ಹಣ ಇದೆ. ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಹಣ ನೀಡಲಾಗುವುದು.
ಮಳೆ ಬೀಳುತ್ತಲೇ ಇರುವುದರಿಂದ ಭೂ ಕುಸಿತದ ಪ್ರದೇಶವನ್ನು ಸರಿ ಪಡಿಸಲು ಕಷ್ಟ ಆಗುತ್ತಿದೆ. ಜಿಲ್ಲೆಯಲ್ಲಿ 20 ಕಡೆ ಭೂ ಕುಸಿತ ಆಗಿದೆ, ಬಹುತೇಕ ಕಡೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಭೂಮಿ ಜಾರಿದೆ. ಅದೃಷ್ಟವಶಾತ್ ಪ್ರಾಣ ಹಾನಿ ಆಗಿಲ್ಲ. ಹಲವರು ಗಾಯಗೊಂಡಿದ್ದಾರೆ.‌
67 ಮನೆಗಳು ಪೂರ್ಣಹಾನಿ ಆಗಿವೆ. 176 ಮನೆಗಳು ಭಾಗಶಃ ಹಾನಿ ಆಗಿವೆ. 24 ಗಂಟೆಗಳ ಒಳಗೆ ಪೂರ್ಣ ಮತ್ತು ಭಾಗಶಃ ಹಾನಿ ಆಗಿರುವ ಘಟನೆಗಳೂ ನಡೆದಿವೆ. ಒಂದು ಲಕ್ಷದ 20 ಸಾವಿರ ರೂಪಾಯಿ ಜೊತೆಗೆ ಮನೆ ಕಟ್ಟಿ ಕೊಡಲಾಗುವುದು. ಭಾಗಶಃ ಹಾನಿ ಆಗಿರುವ ಮನೆಗಳಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು.‌ ಇದರಲ್ಲಿ 43 ಸಾವಿರ ರಾಜ್ಯ ಸರ್ಕಾರದ ಹಣ. ಈಗಾಗಲೇ ಸಂತ್ರಸ್ಥರ ಖಾತೆಗೆ ಹಣ ವರ್ಗಾವಣೆ ಆಗಿದೆ. 16 ಜಾನವಾರು ಸತ್ತಿವೆ. ತಲಾ 35 ಸಾವಿರ ಪರಿಹಾರ ನೀಡಿದ್ದೇನೆ. 14 ಪರಿಹಾರ ಕ್ಯಾಂಪ್ ಗಳನ್ನು ತೆರೆಯಲಾಗಿದೆ. 10 ಕ್ಯಾಂಪ್ ಗಳಲ್ಲಿ 186 ಮಂದಿ ಇದ್ದಾರೆ. ತೋರಾ ಕ್ಯಾಂಪ್ ನಲ್ಲಿ ಇರುವವರ ಜೊತೆ ನಾನೇ ನೇರವಾಗಿ ಮಾತನಾಡಿದ್ದೇನೆ. 28 ಹೆಕ್ಟೇರ್ ನಲ್ಲಿ ತೋಟಗಾರಿಕಾ ಬೆಳೆ ಹಾನಿಯಾಗಿದೆ. ಕಾಫಿ ಬೋರ್ಡ್ ಮತ್ತು ಕಂದಾಯ ಇಲಾಖೆ ಜಂಟಿ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. 2,708 ವಿದ್ಯುತ್ ಕಂಬಗಳು ಬಿದ್ದು ಹೋಗಿವೆ. 150 ಬಿಟ್ಟು ಉಳಿದೆಲ್ಲಾವನ್ನೂ ಮತ್ತೆ ಅಳವಡಿಸಲಾಗಿದೆ. ಹಾಳಾಗಿದ್ದ 47 ಟ್ರಾನ್ಸ್ ಫಾರ್ಮರ್ ಗಳನ್ನೂ ಹೊಸದಾಗಿ ಅಳವಡಿಸಲಾಗಿದೆ. 344 ಕಿಮೀ ಉದ್ದದ ಲೋಕೋಪಯೋಗಿ, ಜಿಲ್ಲಾ ಪಂಚಾಯ್ತಿ ರಸ್ತೆಗಳು ಹಾನಿ ಆಗಿವೆ. ಇವೆಲ್ಲವನ್ನೂ ಆದ್ಯತೆ ಮೇಲೆ ಸರಿಪಡಿಸಲು ಸೂಚಿಸಲಾಗಿದೆ. ಈ ಬಾರಿ ವಾಡಿಕೆಗಿಂತ ಶೇ50 ರಷ್ಟು ಹೆಚ್ಚು ಮಳೆಯಾಗಿದೆ.‌ ಮುಂಜಾಗ್ರತಾ ಕ್ರಮಗಳ ಜೊತೆಗೆ ಅನಾಹುತದ ಬಳಿಕ ಪರಿಹಾರ ಕಾರ್ಯಗಳನ್ನು ತುರ್ತಾಗಿ ನಡೆಸಲಾಗುತ್ತಿದೆ. ಭೂ ಕುಸಿತದ ದುರಸ್ತಿ ಕಾರ್ಯವನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸಲು ಸ್ಪಷ್ಟ ಸೂಚನೆ ನೀಡಲಾಗಿದೆ. ಶಿರಾಡಿ ಘಾಟಿಗೆ ಭೇಟಿ ನೀಡಿ ಅನಾಹುತಗಳನ್ನು ಪರಿಶೀಲನೆ ನಡೆಸುತ್ತೇನೆ. ಭೂ‌ಕುಸಿತ ಪ್ರದೇಶಗಳಲ್ಲಿ ಶಾಶ್ವತ ಪರಿಹಾರಕ್ಕೆ ಜಿಎಸ್‌ಐ ವರದಿ ನೋಡಿ ನಂತರ ತೀರ್ಮಾನಿಸಲಾಗುವುದು ಎಂದರು.

Tags :
#FloodReliefWork#samyuktakarnataka#ಸಂಯುಕ್ತ ಕರ್ನಾಟಕಪ್ರವಾಹ
Next Article