ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ 40% ಅನುಷ್ಠಾನ
ಚಿತ್ರದುರ್ಗ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ 28 ನ್ನೂ ಗೆಲ್ಲುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಕೈ ಬಲ ಪಡಿಸಿ ಹೊಸ ಇತಿಹಾಸ ಸೃಷ್ಠಿಸಬೇಕು ಎನ್ನುವುದು ನನ್ನ ಗುರಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ನಿನ್ನೆ ದಿನ ಅಧಿಕೃತವಾಗಿ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷರಾಗಿ ಜವಬ್ದಾರಿ ವಹಿಸಿಕೊಂಡ ಬಳಿಕಾ ಇಂದು ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕಾ ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದೆ ಯಡಿಯೂರಪ್ಪ ಅಧಿಕಾರ ಅವಧಿಯಲ್ಲಿ 20 ಕ್ಷೇತ್ರ ಗೆದ್ದಿದ್ದೇವೆ. ನಾನು ಎಲ್ಲಾ ಕ್ಷೇತ್ರ ಗೆಲ್ಲಲು ಕಾರ್ಯೋನ್ಮುಖನಾಗಿ ಕೆಲಡ ಮಾಡುವೆ. ಒಂದು ದಿನ ಕೂಡಾ ಬಿಡುವು ನೀಡದೆ ಸಂಚಾರ ಮಾಡುವೆ. ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ಕೂಡಾ ಗೆಲ್ಲಬೇಕಿದ್ದು, ಈ ನಿಟ್ಟಿನಲ್ಲಿ ನಮ್ಮ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ ಎಂದರು.
ಬಿಜೆಪಿ ಸರ್ಕಾರ 40% ಸರ್ಕಾರ ಎಂದು ಕಾಂಗ್ರೆಸ್ ನಾಯಕರು ಪೂಜೆ ಮಾಡುತ್ತಿದ್ದರು. ಆದರೆ ಇಂದು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ 40% ಅನುಷ್ಠಾನ ಈ ಸರ್ಕಾರ ಮಾಡುತ್ತಿದ್ದೆ. ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ಐಟಿ ದಾಳಿ ಕುರಿತು ಕಾಂಗ್ರೆಸ್ ನಾಯಕರು ಸ್ವಾಗತ ಮಾಡಿಲ್ಲ. ಐಟಿ ದಾಳಿಯಲ್ಲಿ ವಶ ಆದ ಹಣ ಕಾಂಗ್ರೆಸ್ ಪಕ್ಷದ್ದು ಎಂದು ರಾಜ್ಯದ ಜನ ಚರ್ಚೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ ಅವರು, ಸರ್ಕಾರ ಬಂದ ಬಳಿಕ ಒಂದೂ ಯೋಜನೆ ಜಾರಿಯಾಗಿಲ್ಲ. ಜನರಿಗೆ ಅರೆಬರೆ ಬೆಂದ ಗ್ಯಾರಂಟಿ ಸ್ಕೀಮ್ ತುಪ್ಪ ಹಚ್ಚಿದ್ದಾರೆ ಎಂದು ಆರೋಪಿಸಿದರು.
ವರ್ಗಾವಣೆ ದಂಧೆಯಲ್ಲಿ ಕಾಂಗ್ರೇಸ್ ಸರ್ಕಾರ ಇದೆ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಗ ಯತೀಂದ್ರ ಸಾಭೀತು ಮಾಡಿದ್ದು, ಅವರ ವಿಡಿಯೋವನ್ನು ರಾಜ್ಯದ ಜನ ನೋಡುತ್ತಿದ್ದಾರೆ. ಐಟಿ ದಾಳಿಯಾದ ಬಳಿಕ ಮತ್ತೊಂದು ದಾಖಲೆ ಸಿಕ್ಕಿದ್ದೆ. ಇದಕ್ಕೆಲ್ಲಾ ರಾಜ್ಯದ ಜನ ಮುಂದೆ ತಕ್ಕ ಉತ್ತರ ನೀಡುತ್ತಾರೆ ಎಂದರು. ನಾನು ರಾಜ್ಯಾಧ್ಯಕ್ಷ ಸ್ಥಾನ ಪಡೆದಯಲು ಅನೇಕ ಹಿರಿಯ ನಾಯಕರು ಕೂಡಾ ಆಶಿರ್ವಾದ ಮಾಡಿದ್ದಾರೆ. ಯತ್ನಾಳ್ ಜೀ , ಸೋಮಣ್ಣ ಅವರ ಬಗ್ಗೆ ಗೌರವ ಇದೆ. ಬರುವ ದಿನಗಳಲ್ಲಿ ಎಲ್ಲರೂ ಕೂಡಾ ನಮ್ಮ ಕೈಜೋಡಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚಿತ್ರದುರ್ಗ ಮುರುಘಾ ಮಠದ ಸ್ವಾಮೀಜಿಗಳ ಗದ್ದುಗೆಗೆ ನಮಿಸಿದ ಬಳಿಕಾ, ಯಾದವಾನಂದ ಮಠಕ್ಕೆ ಭೇಟಿ ನೀಡಿ ನಂತರ ಜಿಲ್ಲೆಯ ವಿವಿಧ ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶಿರ್ವಾದ ಪಡೆದರು.