ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕಾಂಗ್ರೆಸ್ ಆಡಳಿತದಲ್ಲಿ 'ಹನುಮಾನ್ ಚಾಲೀಸಾ' ಆಲಿಸುವುದು ಅಪರಾಧ

01:55 PM Apr 23, 2024 IST | Samyukta Karnataka

ರಾಜಸ್ಥಾನ: ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ 'ಹನುಮಾನ್ ಚಾಲೀಸಾ' ಆಲಿಸುವುದು ಅಪರಾಧವಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇಶವು ಹನುಮ ಜಯಂತಿಯನ್ನು ಆಚರಿಸುತ್ತಿರುವ ದಿನದಂದು ರಾಜಸ್ಥಾನದ ಟೋಂಕ್-ಸವಾಯಿ ಮಾಧೋಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿ ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ ಅಂಗಡಿಯಲ್ಲಿ ಕುಳಿತು ಹನುಮಾನ್ ಚಾಲೀಸಾ ಕೇಳುತ್ತಿದ್ದ ಎಂಬ ಕಾರಣಕ್ಕೆ ಅಂಗಡಿಯವನಿಗೆ ಕ್ರೂರವಾಗಿ ಥಳಿಸಲಾಗಿತ್ತು ಎಂದು ಕಿಡಿಕಾರಿದರು. ಈ ಬಾರಿಯ ರಾಮನವಮಿಯಂದು ಮೊದಲ ಬಾರಿಗೆ, ರಾಜಸ್ಥಾನದಲ್ಲಿ ಶೋಭಾಯಾತ್ರೆಯ ಮೆರವಣಿಗೆಯನ್ನು ನಡೆಸಲಾಯಿತು. ರಾಜಸ್ಥಾನದಂತಹ ರಾಜ್ಯದಲ್ಲಿ ಅಲ್ಲಿ ಜನರು ರಾಮ-ರಾಮ ಎಂದು ಜಪಿಸುತ್ತಾರೆ ಎಂದು ಹೇಳಿದರು.

Next Article