ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕಾಂಗ್ರೆಸ್ ಸರ್ಕಾರದ ಲ್ಯಾಂಡ್ ಜಿಹಾದ್

11:26 AM Feb 29, 2024 IST | Samyukta Karnataka

ಬೆಂಗಳೂರು: ಐನೂರು ಕೋಟಿಗೂ ಹೆಚ್ಚು ಬೆಲೆ ಬಾಳುವ ಜಾಗವನ್ನು ಹಸ್ತಾಂತರ ಮಾಡಲು ನಾವು ಬಿಡುವುದಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶು ಸಂಗೋಪನಾ ಇಲಾಖೆಯ ಸುಪರ್ದಿಯಲ್ಲಿದ್ದ ಜಾಗವನ್ನು ಅಲ್ಪಸಂಖ್ಯಾತ ಇಲಾಖೆಗೆ ವರ್ಗಾಯಿಸುವಂತೆ ಆದೇಶ ಹೊರಡಿಸಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿ ಪೋಸ್ಟ್‌ ಮಾಡಿರುವ ಅವರು ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಬೆಲೆಬಾಳುವ ಪಶುಸಂಗೋಪನೆ ಇಲಾಖೆಯ ಎರಡು ಎಕರೆ ಜಾಗವನ್ನು ಮುಸ್ಲಿಮರಿಗೆ ನೀಡುವ ಹುನ್ನಾರ ಮಾಡುತ್ತಿದ್ದೀರಲ್ಲ ಸಿಎಂ ಸಿದ್ದರಾಮಯ್ಯನವರೇ, ಮುಸ್ಲಿಮರ ಓಲೈಕೆಗೆ ಒಂದು ಇತಿ ಮಿತಿ ಬೇಡವೇ?

ದನ ಕರುಗಳಿಗೆ ಚಿಕಿತ್ಸೆ ನೀಡುವ ಸರ್ಕಾರಿ ಪಶು ಚಿಕಿತ್ಸಾಲಯವನ್ನ ಮುಚ್ಚಿಸಿ ಅದನ್ನ ಮುಸ್ಲಿಂರಿಗೆ ಕೊಡುವ ಅನಿವಾರ್ಯತೆ ಆದರೂ ಏನಿತ್ತು? ಜಾನುವಾರುಗಳಿಗೆ ಮಾತ್ರ ಆ ಚಿಕಿತ್ಸಾಲಯ ಸ್ಥಾಪಿಸಿಲ್ಲ. ಇತರೆ ಸಾಕು ಪ್ರಾಣಿಗಳ ಚಿಕಿತ್ಸೆಗೂ ಸ್ಥಾಪಿಸಲಾಗಿತ್ತು. ನಗರದ ಹೃದಯಭಾಗದಲ್ಲಿರುವ ಐನೂರು ಕೋಟಿಗೂ ಹೆಚ್ಚು ಬೆಲೆ ಬಾಳುವ ಜಾಗವನ್ನು ಹಸ್ತಾಂತರ ಮಾಡಲು ನಾವು ಬಿಡುವುದಿಲ್ಲ.
ಕಾಂಗ್ರೆಸ್ ಸರ್ಕಾರದ ಈ ಕ್ರಮವನ್ನು ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಲ್ಯಾಂಡ್ ಜಿಹಾದ್ ಎಂದು ಕರೆಯಬಹುದೇ? ಎಂದು ಪ್ರಶ್ನಿಸಿದ್ದಾರೆ.

Next Article