ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕಾಡಾನೆಗಳ ತುಳಿತಕ್ಕೆ ಕಾರ್ಮಿಕ ಮಹಿಳೆ ಸಾವು

09:36 AM Nov 08, 2023 IST | Samyukta Karnataka

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಾಡಾನೆಗಳ ಪುಂಡಾಟಕ್ಕೆ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಆಲ್ದೂರು ಸಮೀಪದ ಹೆಡದಾಳು ಗ್ರಾಮದಲ್ಲಿ ಬುಧವಾರ ಬೆಳಗ್ಗೆ ನಡೆದಿದ್ದು, ಮೃತ ಮಹಿಳೆಯನ್ನು ಮೀನಾ (45) ಎಂದು ಗುರುತಿಸಲಾಗಿದೆ.

ಆಲ್ದೂರು ವಲಯದ ಅರಣ್ಯದಲ್ಲಿ 7 ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು ಇಂದು ಬೆಳಿಗ್ಗೆ ವೀಣಾ ಅವರು ತೋಟಕ್ಕೆ ಕೆಲಸಕ್ಕೆ ಹೋಗುವಾಗ ದಾಳಿ ನಡೆಸಿದೆ ಪರಿಣಾಮ ಗಂಭೀರ ಗಾಯಗೊಂಡ ವೀಣಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಜಿಲ್ಲೆಯಾದ್ಯಂತ ಕಾಡಾನೆಗಳ ಹಾವಳಿ ಮಿತಿಮೀರಿದ್ದು ಕಳೆದ ಎರಡು ತಿಂಗಳಲ್ಲಿ ನಡೆದ ಎರಡನೇ ಘಟನೆ ಇದಾಗಿದ್ದು, ಸ್ಥಳೀಯರು ಅರಣ್ಯ ಇಲಾಖೆಯ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆನೆಗಳನ್ನ ಓಡಿಸುವಂತೆ ಪ್ರತಿಭಟನೆ ನಡೆಸಿದ ಸ್ಥಳೀಯರು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಆಲ್ದೂರು ಅರಣ್ಯ ಇಲಾಖೆಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Next Article