ಕಾಡಾನೆ ದಾಳಿಯಿಂದ ಸೀತೂರು ಗ್ರಾಮದ ವ್ಯಕ್ತಿಸಾವು
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆ ಹಾವಳಿ ತೀವ್ರಗೊಂಡಿದ್ದು ಶನಿವಾರ ನರಸಿಂಹರಾಜಪುರ ತಾಲೂಕಿನಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ನರಸಿಂಹರಾಜಪುರ ತಾಲೂಕಿನ ಸೀತೂರು ಗ್ರಾಮದ ಉಮೇಶ್(೫೬) ಆನೆದಾಳಿಯಿಂದ ಮೃತರಾಗಿದ್ದಾರೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆನೆ ಉಮೇಶ್ ಅವರ ಮೇಲೆ ದಾಳಿ ಮಾಡಿ ಸಾಯಿಸಿದೆ. ಆನೆದಾಳಿಯಿಂದ ವ್ಯಕ್ತಿ ಮೃತಪಟ್ಟಿದ್ದಾರೆ.
ಆನೆಗಳ ಹಾವಳಿಗೆ ಕಡಿವಾಣ ಹಾಕುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆನೆ ದಾಳಿಯಿಂದ ಉಮೇಶ್ ಮೃತಪಟ್ಟಿದ್ದು ಸ್ಥಳಕ್ಕೆ ನರಸಿಂಹರಾಜಪುರ ಪೊಲೀಸರು ಹಾಗೂ ಅರಣ್ಯ ಇಲಾ ಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತಾಲೂಕಿನ ಮೆಣಸಿನ ಮಲ್ಲೇದೇವರಹಳ್ಳಿ, ಆಲದಗುಡ್ಡೆ, ವಸ್ತಾರೆ, ಕೆಸವಿನಮನೆ ಮೂಗ್ತಿಹಳ್ಳಿ, ಕದ್ರಿಮಿದ್ರಿ ಕಂಚಿ ನಹಳ್ಳಿ, ಕೆ.ಆರ್.ಪೇಟೆ ಕಂಬಿಹಳ್ಳಿ ಸುತ್ತಮುತ್ತಲ ಗ್ರಾಮಗಳಲ್ಲಿ ಬೀಟಮ್ಮ ಗ್ಯಾಂಗಿನ ಆನೆಗಳು ಎರಡು ಮರಿಗಳೊಂದಿಗೆ ಮಾರಿ ಕಟ್ಟೆ ಅರಣ್ಯ ಪ್ರದೇಶದಲ್ಲಿ ಬೀಡು ಬಿಟ್ಟು ಜಮೀನು ತೋಟಗಳಿಗೆ ಲಗ್ಗೆ ಇಟ್ಟು ಬೆಳೆ ಹಾನಿ ಮಾಡುತ್ತಿರುವುದರೊಂದಿಗೆ ಜನರಲ್ಲಿ ಜೀವಭಯವನ್ನು ಸೃಷ್ಟಿಸಿದ್ದಾರೆ.