For the best experience, open
https://m.samyuktakarnataka.in
on your mobile browser.

ಕಾನೂನು ಸುವ್ಯವಸ್ಥೆಯ ಗ್ಯಾರೆಂಟಿ ಎಲ್ಲಿದೆ?

11:30 AM Jan 21, 2025 IST | Samyukta Karnataka
ಕಾನೂನು ಸುವ್ಯವಸ್ಥೆಯ ಗ್ಯಾರೆಂಟಿ ಎಲ್ಲಿದೆ

ಕುರ್ಚಿಗೆ ಅಂಟಿಕೊಂಡು ಇನ್ನೆಷ್ಟು ದಿನ ಸರ್ಕಾರ ನಡೆಸುತ್ತೀರಿ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಪಾತಾಳಕ್ಕೆ ಕುಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಸರಣಿ ಪ್ರಕರಣಗಳ ಕುರಿತು ಪೋಸ್ಟ್‌ ಮಾಡಿದ್ದು

❌ಕೆ.ಆರ್.ಮಾರುಕಟ್ಟೆಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಸುಲಿಗೆ

❌ವಿಜಯಪುರದಲ್ಲಿ ಮೂವರು ಕೂಲಿ ಕಾರ್ಮಿಕರನ್ನು ಕಟ್ಟಿ ಹಾಕಿ ಅಮಾನವೀಯ ಹಲ್ಲೆ

❌ ಬೀದರ್, ಮಂಗಳೂರು, ಚಿತ್ರದುರ್ಗ, ಮೈಸೂರು, ಆನೇಕಲ್, ಹುಬ್ಬಳ್ಳಿಯಲ್ಲಿ - 5 ದಿನಗಳ ಅಂತರದಲ್ಲಿ ಒಟ್ಟು 6 ದರೋಡೆ, ಸುಲಿಗೆ, ಕಳ್ಳತನ ಪ್ರಕರಣಗಳು

ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಪಾತಾಳಕ್ಕೆ ಕುಸಿದಿದೆ. ಜನಸಾಮಾನ್ಯರು ಭಯಭೀತರಾಗಿ ದಿನಕಳೆಯುವ ದುಸ್ಥಿತಿ ಬಂದಿದೆ. ಹೆಣ್ಣುಮಕ್ಕಳು ಸುರಕ್ಷಿತವಾಗಿ ಓಡಾಡುವ ವಾತಾವರಣ ಇಲ್ಲದಂತಾಗಿದೆ.

ಕುರ್ಚಿಗೆ ಅಂಟಿಕೊಂಡು ಇನ್ನೆಷ್ಟು ದಿನ ಇಂತಹ ಕೆಟ್ಟ ಸರ್ಕಾರ ನಡೆಸುತ್ತೀರಿ. ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಈ ದುರಾಡಳಿತದಿಂದ, ಆರಾಜಕತೆಯಿಂದ ರಾಜ್ಯದ ಜನತೆಗೆ ಮುಕ್ತಿ ನೀಡಿ ಎಂದಿದ್ದಾರೆ.

Tags :