ಕಾಪು ಪುರಸಭಾ ಸದಸ್ಯೆ ಸರಿತಾ ಬಿಜೆಪಿ ಸೇರ್ಪಡೆ
ಭಾರತೀಯ ಜನತಾ ಪಕ್ಷ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮೆಚ್ಚಿ ಎಸ್.ಡಿ.ಪಿ.ಐ (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ) ಬೆಂಬಲಿತ ಕಾಪು ಪುರಸಭಾ ಸದಸ್ಯೆ ಸರಿತಾ ಹಾಗೂ ಅವರ ಪತಿ ಶಿವಾನಂದ್ ಇಂದು ದಿನಾಂಕ 28-08-2024 ರಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ ಅವರು ಭಾರತೀಯ ಜನತಾ ಪಕ್ಷದ ಬಾವುಟವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಬಾಲಾಜಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಕೋಶಾಧಿಕಾರಿಗಳಾದ ಮನೋಹರ್ ಕಲ್ಮಾಡಿ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು, ಜಿಲ್ಲಾ ಬಿಜೆಪಿ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಕಾಪು ಪುರಸಭೆಯ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.