ಕಾಫಿನಾಡಿನಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿ
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿಯಾಗಿದೆ.
ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ ಮೃತ ಮಹಿಳೆಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೆಎಫ್.ಡಿ ಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೆ ಏರಿದ್ದು ಮಲೆನಾಡಲ್ಲಿ ಮಂಗನ ಕಾಯಿಲೆ ಪ್ರಮಾಣ ಹೆಚ್ಚುತ್ತಿದೆ.
ಮಂಗನ ಕಾಯಿಲೆಗೆ ಕಾಫಿನಾಡಿನಲ್ಲಿ ಮತ್ತೊಂದು ಬಲಿಯಾಗಿದೆ. ಮಂಗನ ಕಾಯಿಲೆಗೆ 68 ವರ್ಷದ ವೃದ್ಧೆ ಒಬ್ಬರು ಸಾವನ್ನಪ್ಪಿದ್ದಾರೆ.
ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ ಮೃತ ಮಹಿಳೆ ಯಾಗಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದ ರತ್ನ ಇಂದು ನಿಧನ ಆಗಿದ್ದಾರೆ.
ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರತ್ನ ಅವರಿಗೆ ರಕ್ತ ಪರೀಕ್ಷೆಯಲ್ಲಿ ಮಂಗನ ಕಾಯಿಲೆ ದೃಢವಾಗಿತ್ತು, ಇದರೊಂದಿಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆಎಫ್.ಡಿ ಗೆ ಬಲಿಯಾದ ವರ ಸಂಖ್ಯೆ ನಾಲ್ಕಕ್ಕೆ ಏರಿಕೆ ಆಗಿದೆ.
ಇದರೊಂದಿಗೆ ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಈ ಮಂಗನಕಾಯಿಲೆ ಕೊಪ್ಪ, N.R ಪುರ, ಶೃಂಗೇರಿ ತಾಲೂಕುಗಳಲ್ಲಿ ದಿನೆ ದಿನೇ ಹೆಚ್ಚುತ್ತಿವೆ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 11 KFD ಸೋಂಕಿತರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಇದ್ದಾರೆ.