For the best experience, open
https://m.samyuktakarnataka.in
on your mobile browser.

ಕಾರಾಗೃಹದಲ್ಲಿ ಆರೋಪಿಗಳಿಗೆ ರಾಜ್ಯಾತಿಥ್ಯ ಅರೋಪ, ವರದಿ ಸಲ್ಲಿಸುವಂತೆ ಪೊಲೀಸ್ ಆಯುಕ್ತರಿಗೆ ಸೂಚನೆ

01:00 PM Dec 20, 2023 IST | Samyukta Karnataka
ಕಾರಾಗೃಹದಲ್ಲಿ ಆರೋಪಿಗಳಿಗೆ ರಾಜ್ಯಾತಿಥ್ಯ ಅರೋಪ  ವರದಿ ಸಲ್ಲಿಸುವಂತೆ ಪೊಲೀಸ್ ಆಯುಕ್ತರಿಗೆ ಸೂಚನೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ವಿವಿಧ ಪ್ರಕರಣದಲ್ಲಿ ಬಂಧನಕ್ಕೊಳಗಾದವರಿಗೆ ರಾಜ್ಯಾತಿಥ್ಯ ನೀಡಲಾಗುತ್ತಿದೆ ಎಂಬ ಅರೋಪ ಕೇಳಿಬರುತ್ತಿದ್ದು, ಈ ಕುರಿತು ನಾಳೆಯೊಳಗೆ ಸಮಗ್ರ ವರದಿ ಸಲ್ಲಿಸವಂತೆ ನಗರ ಪೊಲೀಸ್ ಆಯುಕ್ತ ಆರ್.ಚೇತನ ಕುಮಾರ ಮತ್ತು ಎಸ್.ಪಿ. ಅಡ್ಡೂರು ಶ್ರೀನುವಾಸಲು ಅವರಿಗೆ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಖಡಕ್ ಸೂಚನೆ ನೀಡಿದರು
ಬುಧವಾರ ಇಲ್ಲಿ ನಡೆದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ( ಕೆ.ಡಿ.ಪಿ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಅರಂಭವಾಗುತ್ತಿದ್ದಂತೆ, ಸಚಿವ ಪ್ರಿಯಾಂಕ್ ಖರ್ಗೆ ಅವರು ಕಲಬುರಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ರಂಗನಾಥ ಅವರನ್ನು ಜೈಲಿನಲ್ಲಿ ಏನು ನಡಿತಾ ಇದೆ. ಅಕ್ರಮವಾಗಿ ಗುಟಕಾ ಪೂರೈಸಲಾಗುತ್ತಿದೆಯಂತೆ ಎಂದು ಪ್ರಶ್ನಿಸಿದರು. ಇದೆಲ್ಲದಕ್ಕು ಕಡಿವಾಣ ಹಾಕಬೇಕು. ಯಾವುದೇ ಅಕ್ರಮ ಚಟುಚಟಿಕೆ ಜೈಲು ಅಡ್ಡವಾಗಬಾರದು. ಅಲ್ಲಿನ ಸಿ.ಸಿ.ಟಿ.ವಿ. ಫೂಟೇಜ್ ತರಸಿ ಎಂದು ಸೂಚಿಸಿದರು.
ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ,
ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಡಾ.ಅಜಯ್ ಸಿಂಗ್, ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಸೋಮಶೇಖರ ಗೋನಾಯಕ್, ‌ಶಾಸಕರಾದ ಬಿ.ಆರ್.ಪಾಟೀಲ, ಎಂ.ವೈ.ಪಾಟೀಲ, ಕನೀಜ್ ಫಾತಿಮಾ, ಬಸವರಾಜ ಮತ್ತಿಮೂಡ, ಡಾ.ಅವಿನಾಶ ಜಾಧವ, ಅಲ್ಲಮಪ್ರಭು ಪಾಟೀಲ, ಶಶೀಲ ಜಿ. ನಮೋಶಿ, ವಿಧಾನ ಪರಿಷತ್ ಶಾಸಕರಾದ ಬಿ.ಜಿ.ಪಾಟೀಲ, ತಿಪ್ಪಣಪ್ಪ ಕಮಕನೂರ, ಡಿ.ಸಿ. ಬಿ.ಫೌಜಿಯಾ ತರನ್ನುಮ್, ನಗರ ಪೊಲೀಸ್ ಆಯುಕ್ತ ಆರ್.ಚೇತನಕುಮಾರ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್ ಪಾಟೀಲ ಸೇರಿದಂತೆ ಅನೇಕ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ರಾಜ್ಯದಲ್ಲಿ 250 ಸರ್ಕಾರಿ ಐಟಿಐ ಕಾಲೇಜುಗಳು, 33 GTTC, KGDTI ಸಂಸ್ಥೆಗಳಿವೆ. ಇಲ್ಲಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಹಾಗೂ ಕೌಶಲ್ಯ ತರಬೇತಿ ನೀಡಲಾಗುತ್ತಿದೆ.ಕಲಬುರಗಿ ಯಲ್ಲಿರುವ ಸರ್ಕಾರಿ ಐಟಿಐ ಕಾಲೇಜು ಸೇರಿದಂತೆ ಇತರೆ ತಾಂತ್ರಿಕ ಸಂಸ್ಥೆಗಳ ಅಭಿವೃದ್ದಿಗೆ ಒತ್ತು ನೀಡಲಾಗುತ್ತಿದೆ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿದೆ ಎಂದರು.
ಕಲಬುರಗಿ ಜಿಲ್ಲೆಯಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಹಲವಾರು ಅಭಿವೃದ್ದಿಯಾಗಿವೆ. ಜಿಮ್ಸ್, ಜಯದೇವ ಸಂಸ್ಥೆಯ ವಿಸ್ತರಣೆ, ಟ್ರಾಮಾ ಕೇರ್ ಸೆಂಟರ್ ಸ್ಥಾಪಿಸಲಾಗಿದೆ. ಜೊತೆಗೆ ತಾಯಿ ಮತ್ತು ಮಗು ಆಸ್ಪತ್ರೆ ನಿರ್ಮಾಣ ಮಾಡಲು ನಿರ್ಧಾರ ಮಾಡಲಾಗಿದೆ. ರಾಜ್ಯ ಸರ್ಕಾರದ ಐದನೆಯ ಗ್ಯಾರಂಟಿ ಯೋಜನೆ, ಯುವನಿಧಿ ಯನ್ನು ಜನೇವರಿ 12 ರಂದು ವಿವೇಕಾನಂದ ಜಯಂತಿಯ ದಿನದಂದು ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಸಚಿವರು ಈ ಸಂದರ್ಭದಲ್ಲಿ ಹೇಳಿದರು.