ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕಾರಿನ ಸ್ಟೆಪ್ನಿಯಲ್ಲಿ ಪತ್ತೆಯಾದ ಹಣ

12:05 PM Nov 15, 2024 IST | Samyukta Karnataka

ಕಾರಿನ ಸ್ಟೆಪ್ನಿಯಲ್ಲಿ ಬಚ್ಚಿಟ್ಟಿದ್ದ ಬರೋಬ್ಬರಿ 25 ಲಕ್ಷಕ್ಕೂ ಹೆಚ್ಚು ಹಣವನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ವೇಳೆ ಪತ್ತೆ ಹಚ್ಚಿದ ಘಟನೆ ನಡೆದಿದೆ.
ಜಾರ್ಖಂಡ್‌-ಬಿಹಾರ ಗಡಿಯಲ್ಲಿರುವ ಬುದ್ವಾಡಿನ್ (ಸರೌನ್) ಚೆಕ್ ಪೋಸ್ಟ್‌ನಲ್ಲಿ ನಡೆದಿದೆ. ಗಿರಿದಿಹ್ ಜಿಲ್ಲೆಯ ಜಾರ್ಖಂಡ್-ಬಿಹಾರ ಗಡಿಯ ಸಮೀಪದಲ್ಲಿರುವ ಡಿಯೋರಿ ಪೊಲೀಸ್ ಠಾಣೆ ವ್ಯಾಪ್ತಿಯ ಚೆಕ್‌ಪಾಯಿಂಟ್‌ನಲ್ಲಿ ವಾಹನ ತಪಾಸಣೆಯ ವೇಳೆ ನಗದು ಪತ್ತೆಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ, ಈ ವೀಡಿಯೊವನ್ನು ಬಿಜೆಪಿ ಜಾರ್ಖಂಡ್‌ನ ರಾಜ್ಯಾಧ್ಯಕ್ಷ ಬಾಬುಲಾಲ್ ಮರಾಂಡಿ ಅವರು ಮರು ಹಂಚಿಕೊಂಡಿದ್ದಾರೆ, ಅವರು ಕಾಂಗ್ರೆಸ್ ಮತ್ತು ಜೆಎಂಎಂ "ಹಣಬಲ" ಬಳಸಿಕೊಂಡು ಚುನಾವಣೆಯಲ್ಲಿ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Next Article