ಕಾರುಗಳ ನಡುವೆ ಡಿಕ್ಕಿ: ನಾಲ್ವರು ಸಾವು
02:51 PM Dec 25, 2024 IST | Samyukta Karnataka
ಹಾವೇರಿ: ಎರಡು ಕಾರುಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದುರ್ಘಟನೆ ಶಿಗ್ಗಾವಿ ತಾಲೂಕಿನ ತಡಸ್ ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಡೆದಿದೆ.
ಹುಬ್ಬಳ್ಳಿಯ ಕಡೆಗೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ದಾಟಿ ಬೆಂಗಳೂರಿನ ಕಡೆ ಹೊರಟಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿದೆ. ಚಾಮರಾಜಪೇಟೆ ನಿವಾಸಿ ಚಂದ್ರಮ್ಮ(59), ಮೀನಾ(38) (ಚಂದ್ರಮ್ಮನ ಮಗಳು), ಹರಿಹರದ ಮಹೇಶ್ ಕುಮಾರ್ ಸಿ,(41) (ಚಾಲಕ ಹಾಗೂ ವಾಹನ ಮಾಲೀಕ), ಧನವೀರ(11) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು.
ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟರೆ, ಇನ್ನಿಬ್ಬರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದು, ತಡಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.