For the best experience, open
https://m.samyuktakarnataka.in
on your mobile browser.

ಕಾಲ್ತುಳಿತ: ಸಿಎಂ ಯೋಗಿ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

10:45 PM Jan 29, 2025 IST | Samyukta Karnataka
ಕಾಲ್ತುಳಿತ  ಸಿಎಂ ಯೋಗಿ ತಲಾ 25 ಲಕ್ಷ ರೂ  ಪರಿಹಾರ ಘೋಷಣೆ

ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಮಹಾಕುಂಭದಲ್ಲಿ ಮೌನಿ ಅಮಾವಾಸ್ಯೆಯ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾಗಿ 30 ಜನರು ಸಾವನ್ನಪ್ಪಿದ್ದಾರೆ ಮತ್ತು 60 ಮಂದಿ ಗಾಯಗೊಂಡಿದ್ದಾರೆ. ಇದಕ್ಕೆ ಸಿಎಂ ಯೋಗಿ, ಪ್ರಧಾನಿ ಮೋದಿ ಸೇರಿದಂತೆ ಹಲವು ದೊಡ್ಡ ನಾಯಕರು, ಸಚಿವರು ಸಂತಾಪ ಸೂಚಿಸಿದ್ದಾರೆ. ಇದೀಗ ಈ ಅಪಘಾತದ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಕೂಡ ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದಾರೆ.
ಸಿಎಂ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿ, “ಮಹಾಕುಂಭ-2025, ಪ್ರಯಾಗರಾಜ್‌ನಲ್ಲಿ ನಡೆದ ಘಟನೆ ಅತ್ಯಂತ ದುಃಖಕರ ಮತ್ತು ಹೃದಯವಿದ್ರಾವಕವಾಗಿದೆ. ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ರಾಜ್ಯ ಸರ್ಕಾರವು ಕುಟುಂಬ ಸದಸ್ಯರಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಈ ಘಟನೆ ಅತ್ಯಂತ ದುಃಖಕರವಾಗಿದೆ ಎಂದು ಅವರು ಹೇಳಿದ್ದಾರೆ.