ಕಿತ್ತೂರು ಉತ್ಸವ: ಜಾನಪದ ಕಲಾ ವಾಹಿನಿಗೆ ಚಾಲನೆ
ಕಿತ್ತೂರು: ವೀರರಾಣಿ ಕಿತ್ತೂರು ಚನ್ನಮ್ಮನವರ ಐತಿಹಾಸಿಕ 200ನೇ ವಿಜಯೋತ್ಸವದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭಾಗವಹಿಸಿ, ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕಿ ವೀರರಾಣಿ ಕಿತ್ತೂರು ಚನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ವೀರಕೇಸರಿ ಅಮಟೂರ ಬಾಳಪ್ಪನವರ ಮೂರ್ತಿಗಳಿಗೆ ಮಾಲಾರ್ಪಣೆ ಮಾಡಿ, ಗೌರವ ನಮನ ಸಲ್ಲಿಸಿದೆ. ಇದೇ ವೇಳೆ ಜಾನಪದ ಕಲಾ ವಾಹಿನಿಗೆ ಚಾಲನೆಯ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶಣ್ಣ ಜಾರಕಿಹೊಳಿ, ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗಿಂದ್ರ ಸ್ವಾಮೀಜಿ, ಶಾಸಕ ಬಾಬಾಸಾಹೇಬ್ ಪಾಟೀಲ, ಆಸೀಫ್ ಸೇಠ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೋಲಿಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ್, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಚ್ ಚನ್ನೂರ್, ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.