For the best experience, open
https://m.samyuktakarnataka.in
on your mobile browser.

ಕುಡ್ಲದ "ಪಿಲಿ ಪರ್ಬ-೨೦೨೩" ಸ್ಪರ್ಧಾಕೂಟಕ್ಕೆ ಚಾಲನೆ

05:44 PM Oct 21, 2023 IST | Samyukta Karnataka
ಕುಡ್ಲದ  ಪಿಲಿ ಪರ್ಬ ೨೦೨೩  ಸ್ಪರ್ಧಾಕೂಟಕ್ಕೆ ಚಾಲನೆ

ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ನಡೆಯುತ್ತಿರುವ ದ್ವಿತೀಯ ವರ್ಷದ "ಕುಡ್ಲದ ಪಿಲಿ ಪರ್ಬ-೨೦೨೩" ಸ್ಪರ್ಧಾಕೂಟವನ್ನು ಇಂದು ಬೆಳಿಗ್ಗೆ ಧಾರ್ಮಿಕ ವಿಧಿವಿಧಾನಗಳನ್ವಯ ಗಣಹೋಮದ ನಂತರ ಸಂಸದ ನಳಿನ್ ಕುಮಾರ್ ಕಟೀಲು ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ಕುಡ್ಲ ಪಿಲಿಪರ್ಬದ ರೂವಾರಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಅವರ ತಂಡದ ಕಾರ್ಯವನ್ನು ಶ್ಲಾಘಿಸಿ ಅಭಿನಂದಿಸಿದರು.
ಶಾಸಕ ಡಿ.ವೇದವ್ಯಾಸ್ ಕಾಮತ್ ಮಾತನಾಡಿ, ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದೆ. ಜಿಲ್ಲೆಯ ಅನುಭವಿ ಹಾಗೂ ನುರಿತ ಆರು ಜನ ತೀರ್ಪುಗಾರರ ಸಮ್ಮುಖದಲ್ಲಿ ನಡೆಯಲಿರುವ ಇಂದಿನ ಈ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಎಲ್ಲಾ ೧೫ ಹುಲಿವೇಷ ತಂಡಗಳಿಗೂ ಶುಭ ಹಾರೈಕೆಗಳು ಮತ್ತು ಹುಲಿವೇಷ ತಂಡಗಳನ್ನು ಪ್ರೋತ್ಸಾಹಿಸಲು ಆಗಮಿಸಿದ ಜನತೆಯನ್ನು ಅಭಿನಂದಿಸಿದರು.
ಉದ್ಘಾಟನೆಯ ನಂತರ ಪಿಲಿಪರ್ಬ-೨೦೨೩ ಸ್ಪರ್ಧಾಕೂಟದ ಮೊದಲ ತಂಡವಾಗಿ ಶಿವಶಕ್ತಿ ಟೈಗರ್ಸ್ ಕುಂಜತ್ತೂರು, ಮಂಜೇಶ್ವರ ಪ್ರದರ್ಶನ ನೀಡಿತು.
ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪ ಮೇಯರ್ ಸುನಿತಾ ಪೂಜಾರಿ, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ, ಉದಯ ಪೂಜಾರಿ, ಮಾಜಿ ಶಾಸಕ ಮೋನಪ್ಪ ಭಂಡಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಹರಿಕೃಷ್ಣ ಬಂಟ್ವಾಳ, ಕಮಲಾಕ್ಷ ಬಜಿಲಕೇರಿ, ನರೇಶ್ ಶೆಣೈ, ಮತ್ತು ಬಿಜೆಪಿಯ ಮಹಾನಗರ ಪಾಲಿಕೆ ಸದಸ್ಯರುಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.