For the best experience, open
https://m.samyuktakarnataka.in
on your mobile browser.

ಕುಮಾರಸ್ವಾಮಿಯೇ ನಿಲ್ಲಲಿ, ಯಾರೇ ಸ್ಪರ್ಧಿಸಲಿ: ಸೈನಿಕನ ಗೆಲುವು ನಿಶ್ಚಿತ

02:00 PM Oct 24, 2024 IST | Samyukta Karnataka
ಕುಮಾರಸ್ವಾಮಿಯೇ ನಿಲ್ಲಲಿ  ಯಾರೇ ಸ್ಪರ್ಧಿಸಲಿ  ಸೈನಿಕನ ಗೆಲುವು ನಿಶ್ಚಿತ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಫಲಿತಾಂಶವನ್ನು ನಾನೂ ನೋಡುತ್ತೇನೆ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ವರ್ ಅವರು ಜಯಗಳಿಸಬೇಕು. ನನ್ನ ಈ ಕೋರಿಕೆಯನ್ನು ತಾವೆಲ್ಲರೂ ಈಡೇರಿಸುತ್ತೀರಿ ಎಂದು ನಂಬಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಮೆರವಣಿಗೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ಕೆರೆಗಳಿಗೆ ಜೀವದಾನ ಮಾಡಿದ ಯೋಗೇಶ್ವರ್, ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು ಬಾರಿ ಶಾಸಕರಾಗಿದ್ದಾರೆ. ಈಗ ಅಭಿವೃದ್ಧಿಪರವಾಗಿರುವ ಕಾಂಗ್ರೆಸ್ಸಿಗೆ ಮರಳಿದ್ದಾರೆ. ಇವರನ್ನು ನಾವೆಲ್ಲಾ ಖುಷಿಯಿಂದ ಸ್ವಾಗತಿಸಿದ್ದೇವೆ. ಯೋಗೇಶ್ವರ್ ಗೆಲ್ಲುವ ಮೂಲಕ‌ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡಬೇಕು. ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ. ಬಿಜೆಪಿ ಒಕ್ಕೂಟದಿಂದ ಕುಮಾರಸ್ವಾಮಿಯೇ ನಿಲ್ಲಲಿ, ನಿಖಿಲ್ ಕುಮಾರಸ್ವಾಮಿಯೇ ನಿಲ್ಲಲಿ, ಶ್ರೀಮತಿ ಅನಿತಾ ಕುಮಾರಸ್ವಾಮಿಯವರೇ ನಿಲ್ಲಲಿ ಇಲ್ಲಿ ಕಾಂಗ್ರೆಸ್ ಪಕ್ಷದ ಯೋಗೇಶ್ವರ್ ಅವರೇ ಭರ್ಜರಿ ಬಹುಮತದಿಂದ ಜಯಗಳಿಸೋದು ಖಚಿತ. ನಮ್ಮದು ಜನಕಲ್ಯಾಣದ ಸರ್ಕಾರ. ಈ ಸರ್ಕಾರದಲ್ಲಿ ಯೋಗೇಶ್ವರ್ ಅವರು ಇರಬೇಕು. ಹೆಚ್.ಡಿ.ಕುಮಾರಸ್ವಾಮಿ ಅವರು ಶಾಸಕರಾಗಿ, ಮುಖ್ಯಮಂತ್ರಿ ಆಗಿದ್ದಾಗಲೂ ಮಾಡದ ಚನ್ನಪಟ್ಟಣದ ಅಭಿವೃದ್ಧಿ ಕೆಲಸಗಳು ಮುಂದಿನ ತಿಂಗಳಿನಿಂದ ಶಾಸಕರಾಗಿ ಯೋಗೇಶ್ವರ್ ಅವರು ಮುಂದುವರೆಸುತ್ತಾರೆ. ಇವತ್ತು ನಾಮಪತ್ರ ಸಲ್ಲಿಕೆ ಬಳಿಕ ನಾನು ಮತ್ತೆ ಚನ್ನಪಟ್ಟಣಕ್ಕೆ ಪ್ರಚಾರಕ್ಕೆ ಬರುತ್ತೇನೆ ಎಂದರು.

Tags :