For the best experience, open
https://m.samyuktakarnataka.in
on your mobile browser.

ಕೃಷಿ ಕಾರ್ಮಿಕರಿಗೆ ಗುಳೆ ಗ್ಯಾರೆಂಟಿ

01:32 PM Jan 07, 2024 IST | Samyukta Karnataka
ಕೃಷಿ ಕಾರ್ಮಿಕರಿಗೆ ಗುಳೆ ಗ್ಯಾರೆಂಟಿ

ಬೆಂಗಳೂರು: ಎಷ್ಟು ಜನ ಡಿಸಿಎಂಗಳಿರಬೇಕು ಎಂದು ಲೆಕ್ಕಾಚಾರ ಹಾಕುವ ಬದಲು ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಏನು ಮಾಡಬೇಕು ಎಂದು ಯೋಚಿಸಿದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ ವಾಗ್ದಾಳಿ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು "ಬರ ಮತ್ತು ಸಾಲಬಾಧೆಯಿಂದ ಕಂಗೆಟ್ಟಿರುವ ಉತ್ತರ ಕರ್ನಾಟಕದ ರೈತರಿಗೆ ತಮ್ಮ ಜೀವ ಉಳಿಸಿಕೊಳ್ಳಲು ಈಗ ಊರು ಬಿಡುವುದೊಂದೇ ದಾರಿ ಎಂಬ ಶೋಚನೀಯ ಪರಿಸ್ಥಿತಿ ತಂದಿಟ್ಟಿದೆ ಕಾಂಗ್ರೆಸ್ ಸರ್ಕಾರ.
ಸದಾ ಬಣ ರಾಜಕೀಯದಲ್ಲಿ ನಿರತವಾಗಿರುವ ಕಾಂಗ್ರೆಸ್ ಮಂತ್ರಿಗಳು ಹಾಗೂ ಶಾಸಕರು, ಎಷ್ಟು ಜನ ಡಿಸಿಎಂಗಳಿರಬೇಕು ಎಂದು ಲೆಕ್ಕಾಚಾರ ಹಾಕುವ ಬದಲು ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಏನು ಮಾಡಬೇಕು ಎಂದು ಯೋಚಿಸಿದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಪಂಚ ರಾಜ್ಯಗಳ ಚುನಾವಣೆಗೆ ಕಲೆಕ್ಷನ್ ಮಾಡುವಲ್ಲಿರುವ ಆಸಕ್ತಿಯಲ್ಲಿ, ತೆಲಂಗಾಣ ಚುನಾವಣೆಗೆ ಪ್ರಚಾರ ಮಾಡುವಲ್ಲಿರುವ ಉತ್ಸಾಹದಲ್ಲಿ ಕೊಂಚವಾದರೂ ರಾಜ್ಯದ ರೈತರ ಬಗ್ಗೆ ಇದ್ದಿದ್ದರೆ, ಕೃಷಿ ಕಾರ್ಮಿಕರು ಇಂದು ಮನೆ ಮಠ ಬಿಟ್ಟು ಗುಳೆ ಹೋಗುವ ಪರಿಸ್ಥಿತಿ ಬರುತ್ತಿರಲಿಲ್ಲ. ಸಿಎಂ ಸಿದ್ದರಾಮಯ್ಯ ಅವರೇ, ನಿಮ್ಮಲ್ಲಿ ನಿಜಕ್ಕೂ ಮಾನವೀಯತೆ ಇದ್ದರೆ, ರಾಜ್ಯದ ಕೃಷಿ ಕಾರ್ಮಿಕರು, ದಲಿತರು, ಪರಿಶಿಷ್ಟ ಪಂಗಡದವರು, ಹಿಂದುಳಿದವರ ಮೇಲೆ ಕಾಳಜಿ ಇದ್ದರೆ ಮೊದಲು ರಾಜ್ಯದ ಜನತೆ ಗುಳೆ ಹೋಗುವುದನ್ನು ತಪ್ಪಿಸಿ. ಎಲ್ಲದಕ್ಕೂ ಕೇಂದ್ರದತ್ತ ಬೊಟ್ಟು ಮಾಡಿ ತೋರಿಸುವುದೇ ನಿಮ್ಮ ಸಾಧನೆಯಾಗಿಬಿಟ್ಟಿದೆ. ರೈತರ ನೆರವಿಗೆ ಬರಲು ನಿಮ್ಮ ಕೈಲಾಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದಿದ್ದಾರೆ.