ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕೃಷ್ಣದಾಸ ಪ್ರಭು ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

04:45 PM Nov 29, 2024 IST | Samyukta Karnataka

ಮಂಗಳೂರು: ಬಾಂಗ್ಲಾದೇಶದಲ್ಲಿ ಬಂಧಿಸಲ್ಪಟ್ಟ ಧಾರ್ಮಿಕ ಮುಖಂಡ ಚಿನ್ಮಯ ಕೃಷ್ಣದಾಸ ಪ್ರಭು ಅವರನ್ನು ಬಿಡುಗಡೆಗೊಳಿಸಬೇಕು. ಬಾಂಗ್ಲಾದ ಹಿಂದೂಗಳಿಗೆ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ಇಂದು ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ವಿಹೆಚ್‌ಪಿ ಕರ್ನಾಟಕ ದಕ್ಷಿಣ ಪ್ರಾಂತ ಅಧ್ಯಕ್ಷ ಡಾ. ಎಂ.ಬಿ. ಪುರಾಣಿಕ್ ಅವರು, ಬಾಂಗ್ಲಾದಿಂದ ಹಿಂದೂಗಳನ್ನು ಹೊರದಬ್ಬುವ ಷಡ್ಯಂತ್ರ ನಡೆಯುತ್ತಿದೆ. ಜಗತ್ತಿನಲ್ಲಿ ಶಾಂತಿಗಾಗಿ ಹುಟ್ಟಿದ ಇಸ್ಕಾನ್ ಸಂಸ್ಥೆ ಜಗತ್ತಿನ ಜನರ ಪ್ರೀತಿಗಳಿಸಿದೆ. ಬಡವರ ಸೇವೆ ಮಾಡುತ್ತಿರುವ ಇಸ್ಕಾನ್‌ನ ಸ್ವಾಮಿಗಳನ್ನು ಏನೂ ಕಾರಣ ಕೊಡದೆ ಬಾಂಗ್ಲಾದಲ್ಲಿ ಬಂಧಿಸಿದ್ದಾರೆ. ಅಲ್ಲಿನ ಸರಕಾರ, ನ್ಯಾಯಾಲಯ ಅಲ್ಲಿನ ಅಲ್ಪಸಂಖ್ಯಾತರಾದ ಹಿಂದೂಗಳ ವಿರೋಧಿಯಾಗಿದೆ. ಬಾಂಗ್ಲಾದ ಹಿಂದೂಗಳು ಶಾಂತಿಯಿಂದ ಬದುಕಲು ಅವಕಾಶ ನೀಡಬೇಕು. ಇಲ್ಲವಾದರೆ ಮುಂದಿನ ಪರಿಣಾಮಗಳಿಗೆ ಬಾಂಗ್ಲಾ ಸರಕಾರವೇ ಹೊಣೆಯಾಗುತ್ತದೆ. ಬಂಧಿತರನ್ನು ಭೇಷರತ್ತಾಗಿ ಬಿಡುಗಡೆಗೊಳಿಸಬೇಕು ಎಂದು ಹೇಳಿದರು.
ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ, ಇಸ್ಕಾನ್‌ನ ಪ್ರೇಮಭಕ್ತಿ ಪ್ರಭು, ಓಂ ಶ್ರೀ ಮಠದ ವಿದ್ಯಾನಂದ ಸರಸ್ವತಿ ಸ್ವಾಮೀಜಿ, ಇಸ್ಕಾನ್‌ನ ಸಚ್ಚಿದಾನಂದ ಅದ್ವೈತ ದಾಸ, ಪ್ರಮುಖರಾದ ಗೋಪಾಲ್ ಕುತ್ತಾರ್, ಎಚ್.ಕೆ. ಪುರುಷೋತ್ತಮ್ ಜೋಗಿ, ಕೃಷ್ಣ ಪ್ರಸನ್ನ, ಶಿವಾನಂದ ಮೆಂಡನ್, ಪೊಳಲಿ ಗಿರಿಪ್ರಕಾಶ್ ತಂತ್ರಿ, ಭುಜಂಗ ಕುಲಾಲ್ ಪುನೀತ್ ಅತ್ತಾವರ, ಶರಣ್ ಪಂಪ್‌ವೆಲ್, ಗಣೇಶ್ ಪೊದುವಾಳ್, ಶಕೀಲಾ ಕಾವಾ, ಪ್ರೇಮಾನಂದ ಶೆಟ್ಟಿ ಮೊದಲಾದವರು ಪಾಲ್ಗೊಂಡಿದ್ದರು.

Next Article